ಮೈಸೂರು: ಚಾಮುಂಡಿ ಬೆಟ್ಟವನ್ನು ಉಳಿಸಿ ಎಂದು ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
ಕೇಂದ್ರದ ಪ್ರಸಾದ ಯೋಜನೆಯಿಂದ ಚಾಮುಂಡಿ ಬೆಟ್ಟಕ್ಕೆ ತೊಂದರೆಯಾಗುತ್ತಿದೆ. ಚಾಮುಂಡಿ ಬೆಟ್ಟವನ್ನು ಕಾಂಕ್ರೀಟ್ ಕಾಡು ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಬಾರದು. ಇದನ್ನೂ ಓದಿ: ಚಾಮುಂಡಿ ಬೆಟ್ಟವನ್ನು ಕಾಂಕ್ರೀಟ್ ಕಾಡು ಮಾಡಬೇಡಿ – ಮೋದಿಗೆ ಪತ್ರ ಬರೆದ ಭೈರಪ್ಪ
Advertisement
Advertisement
ಪರಿಸರಕ್ಕೆ ಹಾನಿ ಮಾಡುತ್ತಿರುವ ಬೆಟ್ಟದಲ್ಲಿ ನಿರ್ಮಾಣವಾಗಿರುವ ಕಾಂಕ್ರೀಟ್‍ನ್ನು ಸಾಧ್ಯವಾದಷ್ಟರ ಮಟ್ಟಿಗೆ ಕೆಡವಬೇಕು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ಗಣ್ಯವ್ಯಕ್ತಿಗಳ ವಾಹನ ಸೇರಿದಂತೆ ಎಲ್ಲಾ ವಾಹನಗಳಿಗೆ ನಿರ್ಬಂಧ ಹಾಕಬೇಕು. ಸರ್ಕಾರದಿಂದಲೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್‍ಗಳನ್ನು ಓಡಿಸಬೇಕು. ಇದನ್ನೂ ಓದಿ: ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್
Advertisement
ಚಾಮುಂಡಿ ಬೆಟ್ಟದಲ್ಲಿ ಅನೇಕ ಗ್ರಾನೈಟ್ ಬಂಡೆಗಳಿವೆ. ಇದು ಬೇಸಿಗೆಯಲ್ಲಿ ಹೆಚ್ಚು ಶಾಖವನ್ನು ಹೊರಸುಸೂತ್ತದೆ. ಇದನ್ನು ತಪ್ಪಿಸಲು ಆ ಪ್ರದೇಶದಲ್ಲಿ ಹೆಚ್ಚು ಗಿಡಗಳನ್ನು ನೆಡಬೇಕು ಮತ್ತು ಅದನ್ನು ಬೆಳೆಸಬೇಕು. ಇದರಿಂದಾಗಿ ಬೇಸಿಗೆಯಲ್ಲೂ ತಂಪಾದ ವಾತಾವರಣವಿರುತ್ತದೆ.
Advertisement
ದೇವಾಲಯದ ಸುತ್ತ ಹಾಗೂ ಬೆಟ್ಟದ ತುದಿಯಲ್ಲಿ ಕಾಂಕ್ರೀಟ್ ಕಾಡನ್ನು ನಿರ್ಮಿಸುವ ಬದಲು ಗಿಡಗಳನ್ನು ನೆಡಬೇಕು. ಇತ್ತೀಚಿನ ದಿನಗಳಲ್ಲಿ ಯಾರೂ ಹಸಿರೀಕರಣದ ಬಗ್ಗೆ ಪ್ರಸ್ತಾಪಿಸದಿರುವುದು ದುರಂತದ ವಿಷಯವಾಗಿದೆ.
ಚಾಮುಂಡಿ ಬೆಟ್ಟದಲ್ಲಿ ವಾಸ ಇರುವ 4 ಸಾವಿರ ಜನರಿಗೆ ನಗರದಲ್ಲಿ ಸ್ಥಳವಕಾಶ ಮಾಡಿಕೊಡಬೇಕು. ದೇವಸ್ಥಾನದ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿಗೆ ಮಾತ್ರ ಉಳಿಯಲು ಅವಕಾಶ ಕೊಡಬೇಕು. ಇನ್ನುಳಿದ ಜನರನ್ನು ನಗರಕ್ಕೆ ಸ್ಥಳಾಂತರಿಸಿ ಅವರಿಗೆ ಪರಿಹಾರವನ್ನು ನೀಡಬೇಕು. ಇದನ್ನೂ ಓದಿ: ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಹೈಟೆಕ್ ವಂಚನೆ
ಮಲ್ಟಿ ಲೆವಲ್ ಪಾರ್ಕಿಂಗ್‍ನ್ನು ಬೆಟ್ಟದಲ್ಲಿ ಬಳಸುವುದಿಲ್ಲ ಎಂದು ಪರಿಸರವಾದಿಗಳಿಗೆ ಭರವಸೆ ನೀಡಿದ್ದರೂ, ಅಧಿಕಾರಿಗಳು ಅದನ್ನು ನಿರ್ಲಕ್ಷಿಸುತ್ತಿರುವುದು ನನಗೆ ಬೇಸರ ತಂದಿದೆ.
ಬೆಟ್ಟದ ವಾತಾವರಣವೂ ಧ್ಯಾನ ಮಾಡಲು ಹಾಗೂ ಮನಸ್ಸಿಗೆ ನೆಮ್ಮದಿಯನ್ನು ನೀಡುವ ಸ್ಥಳವಾಗಬೇಕು. ಆದರೆ ಬೆಟ್ಟದ ತುದಿಯನ್ನು ವಾಣಿಜ್ಯ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಇದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.