Bengaluru City
ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ವಿಜಯನಗರದ ಎಂ.ಸಿ ಲೇಔಟ್ ನಲ್ಲಿರುವ ನಿವಾಸದಲ್ಲಿ ನಿವೃತ್ತ ಡಿವೈಎಸ್ಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನುಮಂತಪ್ಪ ಆತ್ಮಹತ್ಯೆಗೆ ಶರಣಾದ ನಿವೃತ್ತ ಡಿವೈಎಸ್ಪಿ. ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಇದರಿಂದ ಬೇಸತ್ತು ಹನುಮಂತಪ್ಪ ಖಿನ್ನತೆಗೆ ಒಳಗಾಗಿದ್ದರು. ಇದೇ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಹನುಮಂತಪ್ಪ ಮಾಗಡಿರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿಯಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.
ಹನುಮಂತಪ್ಪ ಅವರ ಮನೆಗೆ ಆಗಮಿಸಿರುವ ಪೊಲೀಸರು ಮೃತದೇಹವನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ವಿಜಯನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
