-ಚುನಾವಣಾ ಪ್ರಚಾರ, ಮತಯಾಚನೆಯಲ್ಲಿ ಭಾಗವಹಿಸುವಂತಿಲ್ಲ
-ಚುನಾವಣಾ ಆಯೋಗದಿಂದ ಐದು ರಾಜ್ಯಗಳಿಗೆ ಸೂಚನೆ
ನವದೆಹಲಿ: ಚುನಾವಣಾ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ಅನ್ವಯಿಸುವ ಮಾದರಿ ನೀತಿ ಸಂಹಿತೆಯ ನಿರ್ಬಂಧಗಳನ್ನು ನಿವೃತ್ತ ಸರ್ಕಾರಿ ಅಧಿಕಾರಿಗಳಿಗೂ ವಿಸ್ತರಿಸಿ ಚುನಾವಣಾ ಆಯೋಗ (Election Commission) ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರಿ ಸೇವೆಯಿಂದ ನಿವೃತ್ತರಾದ ಬಳಿಕವೂ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳ ಆಡಳಿತದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಚುನಾವಣಾ ಅವಧಿಯಲ್ಲಿ ರಾಜಕೀಯವಾಗಿ ತಟಸ್ಥವಾಗಿರಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಮಾರುಕಟ್ಟೆಗೆ – ರಾಜಕೀಯ ಜೀವನದ ಹತ್ತಾರು ಕೌತುಕಗಳು ಬಹಿರಂಗ
ನಿವೃತ್ತ ಅಧಿಕಾರಿಗಳು ಯಾವುದೇ ರಾಜಕೀಯ ಪಕ್ಷದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವಂತಿಲ್ಲ. ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುವುದಕ್ಕೂ ಅವಕಾಶವಿಲ್ಲ. ಅಲ್ಲದೆ, ತಮ್ಮ ಹೆಸರು, ಹುದ್ದೆ ಅಥವಾ ಅಧಿಕಾರವನ್ನು ಬಳಸಿಕೊಂಡು ಯಾವುದೇ ವ್ಯಕ್ತಿ, ರಾಜಕೀಯ ಪಕ್ಷ ಅಥವಾ ಗುಂಪಿನ ಪರವಾಗಿ ಕೆಲಸ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.
ಈ ಸಂಬAಧ ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ. ಈ ಐದು ರಾಜ್ಯಗಳಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಸರ್ಕಾರದ ಅನುದಾನದಿಂದ ಸಂಪೂರ್ಣವಾಗಿ ಅಥವಾ ಭಾಗಶಃ ಕಾರ್ಯನಿರ್ವಹಿಸುವ ಸಂಸ್ಥೆಗಳು, ಸಮಿತಿಗಳು, ನಿಗಮಗಳು ಮತ್ತು ಆಯೋಗಗಳಿಗೂ ಮಾದರಿ ನೀತಿ ಸಂಹಿತೆಯ ನಿಯಮಗಳು ಅನ್ವಯವಾಗುತ್ತವೆ. ಅವುಗಳ ಉದ್ಯೋಗಿಗಳೂ ಈ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ಆಯೋಗ ತಿಳಿಸಿದೆ.ಇದನ್ನೂ ಓದಿ: ಪೆಟ್ರೋಲ್ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷಿಸಿ ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಟ್ಟ ಡಿ.ಎಸ್ ಅರುಣ್
ಸೇವೆಯಲ್ಲಿರುವ ಸರ್ಕಾರಿ ನೌಕರರಿಗೆ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಈಗಾಗಲೇ ನಿರ್ಬಂಧಗಳಿವೆ. ಆದರೆ ನಿವೃತ್ತಿಯ ನಂತರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ಅಥವಾ ಮರುನೇಮಕಗೊಂಡ ಅಧಿಕಾರಿಗಳ ರಾಜಕೀಯ ನಡವಳಿಕೆ ಕುರಿತು ನಿರ್ದಿಷ್ಟ ನಿಯಮಗಳ ಕೊರತೆ ಇತ್ತು. ಈ ಹಿನ್ನೆಲೆಯಲ್ಲಿ ಆಯೋಗ ಹೊಸ ನಿರ್ದೇಶನ ನೀಡಿದೆ.ಇದನ್ನೂ ಓದಿ: ವಿದ್ಯುತ್ ಅವಘಡದಲ್ಲಿ ಯುವಕ ಸಾವು – ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೆಲ್ದಾಳೆ
