ಬೆಳಗಾವಿ: ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರ ನೋಡಲು ನಿವೃತ್ತ ಯೋಧರೊಬ್ಬರು ಸೇನಾ ಸಮವಸ್ತ್ರದಲ್ಲೇ ಆಗಮಿಸಿ ಅಭಿಮಾನ ಮೆರೆದಿದ್ದಾರೆ.
ನಗರದ ಚಿತ್ರಾ ಚಿತ್ರಮಂದಿರಕ್ಕೆ ಕುಟುಂಬ ಸಮೇತವಾಗಿ ಆಗಮಿಸಿದ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ನಿವಾಸಿ ನಿವೃತ್ತ ಯೋಧ ವಿನಾಯಕ ಮೇದಾರ್ ಅವರು ಭಾರತೀಯ ಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿದ್ದಾರೆ. ಇದನ್ನೂ ಓದಿ: ಕಲಾವಿದ ದೇವಿಕಿರಣ್ ಕೈಚಳಕದಲ್ಲಿ ಪವರ್ ಸ್ಟಾರ್ ಪುನೀತ್
ಪುನೀತ್ ರಾಜಕುಮಾರ್ ಅವರ ಅಪ್ಪಟ್ಟ ಅಭಿಮಾನಿ ಆಗಿರುವ ನಿವೃತ್ತ ಯೋಧ ವಿನಾಯಕ ಅವರು ಚಿತ್ರಾ ಟಾಕೀಸ್‍ನಲ್ಲಿ ಕೇಕ್ ಕಟ್ ಮಾಡುವ ಮೂಲಕ ಪುನೀತ್ ಅವರ ಹುಟ್ಟುಹಬ್ಬ ಆಚರಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪ್ಪು ಕೊನೆಯ ಚಿತ್ರದಲ್ಲಿ ಸೈನಿಕನ ಪಾತ್ರದಲ್ಲಿ ನಟಿಸಿದ್ದಾರೆ. ಹೀಗಾಗಿ ನಾನು ನಿವೃತ್ತ ಯೋಧನಾಗಿ ಸೇನಾ ಸಮವಸ್ತ್ರದಲ್ಲೇ ಚಿತ್ರ ನೋಡಲು ಬಂದಿದ್ದೇನೆ. ಇದನ್ನೂ ಓದಿ: ರವಿವರ್ಮಾ ಸ್ಟಂಟ್‌ಗೆ ಪವರ್ ಸ್ಟಾರ್ ಫಿದಾ: ಫೋನ್ ಮಾಡಿ ಪುನೀತ್ ಹೇಳಿದ್ದೇನು?
ಅಪ್ಪು ಕೊನೆಯ ಸಿನಿಮಾ ಅಂತ ನಮಗೇನು ದುಃಖ ಇಲ್ಲ. ನಮ್ಮ ಎದೆಯಲ್ಲಿ ಎಂದೆಂದಿಗೂ ಅಪ್ಪು ಅಜರಾಮರ. ಇದು ಅಪ್ಪು ಅವರ ಕೊನೆಯ ಚಿತ್ರ ಅಂತ ಯಾರೂ ದಯವಿಟ್ಟು ಹೇಳಬೇಡಿ ಎಂದು ಮನವಿ ಮಾಡಿಕೊಂಡರು.