ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಮತದಾನ ಮಹತ್ವ ತಿಳಿಸುವ ಉದ್ದೇಶದಿಂದ ರೇವಾ ವಿಶ್ವವಿದ್ಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ನವೆಂಬರ್ 12ರಂದು ಹಮ್ಮಿಕೊಳ್ಳಲಾಗಿದೆ.
ಈ ಮತದಾನ ಜಾಗೃತಿ ಕಾರ್ಯಕ್ರಮವನ್ನು ರೇವಾ ಚುನಾವಣಾ ಸಾಕ್ಷರತಾ ಸಂಘವು ಆಯೋಜಿಸಿದೆ. ವಿಶ್ವವಿದ್ಯಾಲಯ ಕ್ಯಾಂಪಸ್‍ನ ಕುವೆಂಪು ಸಭಾಭವನದಲ್ಲಿ ನವೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ.
Advertisement
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಗೌರವ ಅತಿಥಿಗಳಾಗಿ ರಾಜ್ಯ ಚುನಾವಣಾ ಆಯೋಗದ ಅಧಿಕಾರಿ ಶ್ರೀನಿವಾಸಾಚಾರ್ಯ ಆಗಮಿಸಲಿದ್ದಾರೆ. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪಿ ಶ್ಯಾಮರಾಜು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
Advertisement
ಉತ್ತಮ ನಾಯಕರ ಆಯ್ಕೆಯಲ್ಲಿ ಪ್ರತಿಯೊಂದು ಮತಕ್ಕೂ ಪ್ರಾಮುಖ್ಯತೆ ಇರುತ್ತದೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆ, ಮತದಾನ ಎಷ್ಟು ಅಗತ್ಯ ಎನ್ನುವ ಕುರಿತು ತಿಳಿಸಲಾಗುತ್ತದೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ರೇವಾ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಎಂ.ಧನಂಜಯ ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/