ಹಾಸನ: ಮಾಜಿ ಶಾಸಕ ಎ.ಮಂಜು (A.Manju) ಜೊತೆ ಅಡ್ಜಸ್ಟ್ ಮಾಡಿಕೊಂಡು ಪಕ್ಷಕ್ಕೆ ಸೇರಿಸಿಕೊಂಡಿದ್ದೇನೆ ಎಂದು ಶಾಸಕ ಎ.ಟಿ ರಾಮಸ್ವಾಮಿ (A.T.Ramaswamy) ಸಾಬೀತು ಪಡೆಸಿದರೆ ನಾನು ಅವರು ಹೇಳುವ ಶಿಕ್ಷೆಗೆ ಗುರಿಯಾಗುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D.Revanna) ವಾಗ್ದಾಳಿ ನಡೆಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ.ಟಿ ರಾಮಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಮಗನ ಮೇಲೆ ಕೇಸ್ ದಾಖಲಿಸಿದವನ ಜೊತೆ ರಾಜಿ ಮಾಡಿಕೊಂಡು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ರಾಮಸ್ವಾಮಿ ಹೇಳಿದ್ದಾರೆ. ಅವರು ಸೀನಿಯರ್ ಅಡ್ವಕೇಟ್ ಇಟ್ಟುಕೊಂಡರು ಸಹ ಹೈಕೋರ್ಟ್‍ನಲ್ಲಿ ನಮ್ಮ ಪರವೇ ಆಗಿದೆ. ಸುಪ್ರೀಂ ಕೋರ್ಟ್‍ನಲ್ಲಿ ನಮ್ಮ ಅಡ್ವಕೇಟ್ ಬಾರದ ಕಾರಣ ರಿಮೆಂಟ್ ಆಯ್ತು. ಅದರ ಪ್ರತಿಯನ್ನು ರಾಮಸ್ವಾಮಿ ಓದಿಕೊಳ್ಳಲಿ. ನಮ್ಮ ಸಂಪೂರ್ಣ ಆಸ್ತಿಯನ್ನು ಐಟಿಗೆ ನೀಡಿದ್ದೇನೆ ಇಡಿ ಮೂಲಕ ತನಿಖೆ ನಡೆಸಿಕೊಳ್ಳಲಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ
Advertisement
Advertisement
ರಾಮಸ್ವಾಮಿಯವರು ಎರಡು ವರ್ಷದಿಂದ ಯಾವ್ಯಾವ ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದರು ಎಂದು ಹೇಳಲಿ. ಹಾಸನ ಮತ್ತು ಬೆಂಗಳೂರಿನಲ್ಲಿ ನಡೆದ ಜಲಧಾರೆ ಯಾತ್ರೆಗೆ ಯಾಕೆ ಬರಲಿಲ್ಲ? ಅವರಿಗೆ ಸೀಟ್ ಕೊಡದೆ ಒದ್ದು ಓಡಿಸಿದ್ದಕ್ಕೆ ನಿಮ್ಮ ಹತ್ರ ಬಂದಿದ್ದಾರೆ ಎಂದು ಶಿವಲಿಂಗೇಗೌಡರು ಹೇಳಿದ್ರಾ? ಹಾಗಾದರೆ ಶಿವಲಿಂಗೇಗೌಡರು ಧರ್ಮಸ್ಥಳದ ಮೇಲೆ ಆಣೆ ಮಾಡಲಿ ಎಂದು ಸವಾಲು ಹಾಕಿದರು.
Advertisement
ಎರಡು ವರ್ಷದಿಂದ ಕಾಂಗ್ರೆಸ್ ಕದ ತಟ್ಟುತ್ತಿದ್ದರು. ಅಲ್ಲಿ ಸೋಲ್ತಾರೆ ಎಂದ ಮೇಲೆ ನಮ್ಮ ಬಳಿ ಬಂದಿದ್ದಾರೆ. ನಾವು ಯಾರ ಹತ್ರವೂ ಅಡ್ಜಸ್ಟ್ ಆಗಿಲ್ಲ. ಎ. ಮಂಜು ಬರ್ತೀನಿ ಅಂದ್ರೆ ಪಕ್ಷ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.
Advertisement
ಶಿವಲಿಂಗೇಗೌಡ (K.L.Shivalinge Gowda) ಪಕ್ಷ ತೊರೆದ ವಿಚಾರವಾಗಿ, ನಾವು ರಾಜಕೀಯವಾಗಿ ಆತ್ಮಹತ್ಯೆ ಮಾಡಿಕೊಳ್ಳುವವರು. ಅವರು ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.
ದೇವರಾಣೆ ಪಕ್ಷ ಬಿಡಲ್ಲ ಎಂದು ಕೆ.ಎಂ ಶಿವಲಿಂಗೇಗೌಡ ಅಂದಿದ್ರು, ಆದರೂ ಪಕ್ಷ ತೊರೆದಿದ್ದಾರೆ. ಕುಮಾರಸ್ವಾಮಿಯವರ (H.D.Kumaraswamy) ಮನೆಯಲ್ಲಿ ಈ ಮಾತು ಹೇಳಿಲ್ಲ ಎಂದರೆ ಅವರು ಧರ್ಮಸ್ಥಳದ ಮಂಜುನಾಥಸ್ವಾಮಿಯ ಮೇಲೆ ಆಣೆಮಾಡಲಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸವಾಲು ಹಾಕಿದ್ದಾರೆ.
ಶಿವಲಿಂಗೇಗೌಡರು ಹೇಳಿದ ಕೆಲಸಗಳನ್ನೆಲ್ಲ ಮಾಡಿಕೊಟ್ಟಿದ್ದೇವೆ. ಜೆಡಿಎಸ್ (JDS) ಗೆ ದುಡ್ಡು ಕೊಟ್ಟು ವೋಟು ತೆಗೆದುಕೊಳ್ಳುವ ಶಕ್ತಿ ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬಳಿ ಖಜಾನೆಯಿದೆ ಎಂದಿದ್ದಾರೆ.
ಅರಸಿಕೆರೆಯಲ್ಲಿ ಬಿಜೆಪಿಯವನು ನಿಂತರೆ ಸೋಲುತ್ತೇನೆ. ಲಿಂಗಾಯತರೆಲ್ಲ ಒಂದೇ ಕಡೆ ಓಟು ಹಾಕುತ್ತಾರೆ ಎಂದು ಶಿವಲಿಂಗೇಗೌಡರು ಹೇಳಿದ್ದರು. ಕಳೆದ ಬಾರಿ ಐದು ಶಾಸಕರು ಕಾಂಗ್ರೆಸ್ (Congress) ತೊರೆದಿದ್ದರು. ಅರಸಿಕೆರೆ ಜನ ದುಡ್ಡಿಗೆ ಮತ ಹಾಕುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್, ಬಿಜೆಪಿಗೆ ಕಾಂಗ್ರೆಸ್ ಗಾಳ- ಡಿ.ಕೆ.ಶಿವಕುಮಾರ್ ಸ್ಪಷ್ಟನೆ