ಬೆಂಗಳೂರು: ಕೆ.ಆರ್.ನಗರ ಸಂತ್ರಸ್ತೆಯನ್ನು ಅಪಹರಣ ಮಾಡಿಸಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಹೆಚ್‍ಡಿ ರೇವಣ್ಣಗೆ (HD Revanna) ಕಡೆಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಇಂದು ಬಿಡುಗಡೆಯಾಗಲಿದ್ದಾರೆ.
ನಿನ್ನೆ ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಜಾಮೀನು ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಂಜೆ 6:30ಕ್ಕೆ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸಂಜೆಯಾದ ಕಾರಣ ಕೋರ್ಟ್ ಸಮಯ ಮುಗಿದಿದ್ದರಿಂದ ಷರತ್ತು ಪೂರೈಸಲು ಸಾಧ್ಯವಾಗಿರಲಿಲ್ಲ. ಮೊದಲಿಗೆ ಜನಪ್ರತಿನಿಧಿಗಳ ಕೋರ್ಟ್‍ನಲ್ಲಿ ಜಾಮೀನು ಪ್ರತಿ ಪಡೆಯಬೇಕು. ಆ ಬಳಿಕ ಸಿಸಿಎಚ್ 42ರಲ್ಲಿ ಷರತ್ತುಗಳ ಪೂರೈಸಲು ವ್ಯವಸ್ಥೆ ಮಾಡಲಾಗಿದೆ. ಮೊದಲಿಗೆ ಷರತ್ತು ಪೂರೈಸಲು ರೇವಣ್ಣ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ.
Advertisement
Advertisement
5 ಲಕ್ಷದ ಬಾಂಡ್, ಇಬ್ಬರು ವೈಯಕ್ತಿಕ ಶ್ಯೂರಿಟಿ ನೀಡಬೇಕು. 5 ಲಕ್ಷದ ಬಾಂಡ್‍ಗೆ ಸಹಿ ಮಾಡಿಸಿ ವಕೀಲರು ಕೋರ್ಟ್‍ಗೆ ತಲುಪಿಸಲಿದ್ದಾರೆ. ಎಸಿಎಂಎಂ ಕೋರ್ಟ್ 42ರಲ್ಲಿ ಈ ಎಲ್ಲಾ ಜಾಮೀನಿನ ಷರತ್ತು ಪೂರೈಸಬೇಕು. ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ರೇವಣ್ಣ ಜೈಲಿಂದ ಬಿಡುಗಡೆಯಾಗಲಿದ್ದಾರೆ. ಇದನ್ನೂ ಓದಿ: ಮಂಗಳವಾರ ರೇವಣ್ಣ ಬಿಡುಗಡೆ – ಕೋರ್ಟ್‌ನಲ್ಲಿ ವಾದ, ಪ್ರತಿವಾದ ಹೇಗಿತ್ತು? ಜಾಮೀನು ಷರತ್ತು ಏನು?