ಹೈದರಾಬಾದ್: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲು ರೇವಂತ್ ರೆಡ್ಡಿಯವರು (Revanth Reddy) ಸಜ್ಜಾಗಿದ್ದು, ಡಿಸೆಂಬರ್ 7 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.
ರೇವಂತ್ ರೆಡ್ಡಿಯವರ ಜೊತೆ ಇತರ ಕೆಲವು ಸಚಿವರುಗಳು ಕೂಡ ಪ್ರಮಣ ವಚನ ಸ್ವೀಕಾರ ಮಾಡಲಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ಸಿಎಂ ನೇಮಕದ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಂಡಿದೆ.
Advertisement
Advertisement
ಈ ಹಿಂದೆ ಡಿಸೆಂಬರ್ 9 ರಂದು ಸೋನಿಯಾ ಗಾಂಧಿಯವರ ಜನ್ಮದಿನವಿದ್ದು, ಇದೇ ದಿನ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದು ಹೇಳಲಾಗಿತ್ತು. ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ (Telangana Vidhanasabha Election Results) ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಅಭೂತಪೂರ್ವ ಜಯಗಳಿಸಿತ್ತು. 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟಬಹುಮತ ಪಡೆದಿತ್ತು.
Advertisement
ಯಾರು ಈ ರೇವಂತ್ ರೆಡ್ಡಿ?: ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ 56 ವರ್ಷದ ಅನುಮುಲಾ ರೇವಂತ್ ರೆಡ್ಡಿ ಪಕ್ಷದ ಪ್ರಮುಖ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಆದರೆ ಇದಕ್ಕೂ ಮೊದಲು ರೇವಂತ್ ರೆಡ್ಡಿ ಆರ್‌ಎಸ್‌ಎಸ್ ಮತ್ತು ಎಬಿವಿಪಿಯಿಂದ ಗುರುತಿಸಿಕೊಂಡಿದ್ದವರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೆಡ್ಡಿ ಅವರು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಪರ ಅವರು ಕ್ಯಾಂಪೇನ್ ನಡೆಸುತ್ತಿದ್ದಾಗ, ಅವರ ಹಿನ್ನೆಲೆ ಹೆಚ್ಚು ಚರ್ಚೆಯಾಗಿತ್ತು.
Advertisement
ರೇವಂತ್ ರೆಡ್ಡಿ ಆರ್‌ಎಸ್‌ಎಸ್ (RSS) ಕೈಗೊಂಬೆ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅನೇಕ ಬಾರಿ ಟೀಕಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ಒಂದಾಗಿ ಕೆಲಸ ಮಾಡುತ್ತಿವೆ ಎಂದೂ ಸಹ ಓವೈಸಿ ಹಿಂದಿನ ದಿನಗಳಲ್ಲಿ ಆರೋಪಿಸಿದ್ದರು.
ರೇವಂತ್ ರೆಡ್ಡಿ ಅವರು ಎಬಿವಿಪಿಯಿಂದ (ABVP) ರಾಜಕೀಯ ಜೀವನ ಆರಂಭಿಸಿದರು. ನಂತರ ಟಿಡಿಪಿಗೆ (TDP) ಹೋದರು. 2009 ಮತ್ತು 2014 ರ ಚುನಾವಣೆಯಲ್ಲಿ ಕೊಡಂಗಲ್ ಕ್ಷೇತ್ರದಿಂದ ಗೆಲುವು ಸಾಧಿಸಿದರು. ಲಂಚ ಹಗರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ನಂತರ ಅವರು ಟಿಡಿಪಿ ತೊರೆದರು. 2017 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಸೇರಿದರು. 2018 ರ ಚುನಾವಣೆಯಲ್ಲಿ ಬಿಆರ್‌ಎಸ್ (BRS) ವಿರುದ್ಧ ಸ್ಪರ್ಧಿಸಿ ಕೊಡಂಗಲ್‌ನಿಂದ ಸೋತರು. ಆದರೆ ಮತ್ತೆ ಪುಟಿದೆದ್ದು 2019 ರ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದರು. ಜೂನ್ 2021 ರಲ್ಲಿ ಅವರನ್ನು TPCC ಮುಖ್ಯಸ್ಥರನ್ನಾಗಿ ನೇಮಿಸಲಾಯಿತು.
ಯಾವುದೇ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಆ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರೇ ಸಿಎಂ ಸ್ಥಾನ ಅಲಂಕರಿಸುವುದು (ಕರ್ನಾಟಕ ಹೊರತುಪಡಿಸಿ) ಸಾಮಾನ್ಯ. ಅಂತೆಯೇ 4 ರಾಜ್ಯ ಚುನಾವಣಾ ಫಲಿತಾಂಶದಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ನಿಚ್ಚಳವಾಗಿದೆ. ಹೀಗಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ರೇವಂತ್ ರೆಡ್ಡಿಯೇ ಸಿಎಂ ಆಗಬಹುದು ಎಂದು ಮೂಲಗಳು ತಿಳಿಸಿವೆ.