ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಹಿಂದಿರುವ ಸಚಿವರ ಮಾಹಿತಿ ಬಹಿರಂಗಪಡಿಸಿ: ಬಿವೈವಿ

Public TV
2 Min Read
b y vijayendra

-ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಆಗ್ರಹ

ಬೆಂಗಳೂರು: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಅವರು ಸಿಎಂಗೆ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ರನ್ಯಾ ರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ. ರನ್ಯಾ ರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ದುಬೈಗೆ ಹಾಗೂ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದ ಮಾಹಿತಿ ಹೊರಬಿದ್ದಿದೆ. ಪ್ರತಿ ಬಾರಿಯೂ ಬೆಂಗಳೂರಿಗೆ ಮರಳಿ ಬಂದಾಗ ಸಂಪೂರ್ಣವಾದ ಪ್ರೋಟೋಕಾಲ್ ವ್ಯವಸ್ಥೆ ನೀಡುತ್ತಿದ್ದರು ಎಂದು ಆರೋಪಿಸಿದರು. ಇದನ್ನೂ ಓದಿ: ತೂಕ ಹೆಚ್ಚಾಗೋ ಭಯ, ಐದಾರು ತಿಂಗಳು ಊಟವಿಲ್ಲ, ಬರೀ ನೀರು – ಯೂಟ್ಯೂಬ್‌ ನೋಡಿ ಡಯಟ್‌ ಮಾಡ್ತಿದ್ದ ಕೇರಳ ಯುವತಿ ಸಾವು!

ರನ್ಯಾ ರಾವ್ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು. ಏರ್‌ಪೋರ್ಟ್‌ಗೆ ವಾಪಸ್ ಬಂದಾಗ ವಿಮಾನ ನಿಲ್ದಾಣದಿಂದ ಪೊಲೀಸರೇ ಎಸ್ಕಾರ್ಟ್ ನೀಡಿ ಕರೆದೊಯ್ಯುತ್ತಿದ್ದರು. ಆಕೆ ಸಾಮಾನ್ಯ ಮಹಿಳೆ ಅಲ್ಲ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ‘ಜೈಲರ್ 2’ ಸಿನಿಮಾ ಶೂಟಿಂಗ್ ಪ್ರಾರಂಭ- ತಲೈವಾ ಭಾಗಿ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರೋಟೋಕಾಲ್ ಸಿಗುತ್ತದೆ. ಸೆಕ್ಯುರಿಟಿ ತಪಾಸಣೆ ಆಗುವುದಿಲ್ಲ ಎಂದಾದರೆ, ಇದರ ಹಿಂದೆ ಕೆಲವು ಘಟಾನುಘಟಿಗಳಿದ್ದಾರೆ. ಅಲ್ಲದೇ ಕೆಲವು ಸಚಿವರಿದ್ದಾರೆ ಎಂಬುದು ಕೂಡ ಹೊರಕ್ಕೆ ಬರುತ್ತಿದೆ. ಈಗಾಗಲೇ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿದೆ. ಈ ಗಂಭೀರ ಪ್ರಕರಣದ ಹಿಂದಿರುವವರ ಮಾಹಿತಿ ಮುಖ್ಯಮಂತ್ರಿಗಳಿಗೆ ಇದ್ದೇ ಇರುತ್ತದೆ ಎಂದರು. ಇದನ್ನೂ ಓದಿ: ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಸರಬರಾಜಿಗೆ ಕ್ರಮ: ದಿನೇಶ್ ಗುಂಡೂರಾವ್

ಸ್ಮಗ್ಲಿಂಗ್ ಹಿಂದೆ ಇರುವ ಹವಾಲಾ ನಿರತರು, ಚಿನ್ನ ಕಳ್ಳಸಾಗಾಟದ ಮಾಫಿಯಾಗಳು, ಬೆಂಬಲ ಕೊಟ್ಟ ರಾಜಕಾರಣಿಗಳು, ಮಂತ್ರಿಗಳು, ಮಾಜಿ ಮಂತ್ರಿಗಳು, ಶಾಸಕರು, ಮಾಜಿ ಶಾಸಕರು ಯಾರೆಂಬುದನ್ನು ಸಿಎಂ ಅವರು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ನಟಿ ರನ್ಯಾಗೆ 15 ದಿನಗಳ ನ್ಯಾಯಾಂಗ ಬಂಧನ

ಒಬ್ಬ ಹಿರಿಯ ಐಪಿಎಸ್ ಪೊಲೀಸ್ ಅಧಿಕಾರಿ ಮಗಳ ನೇತೃತ್ವದಲ್ಲಿ ಇಷ್ಟು ದೊಡ್ಡ ಚಿನ್ನ ಕಳ್ಳಸಾಗಾಟ ನಡೆದಿರುವುದನ್ನು ನಾವೆಂದೂ ಕೇಳಿರಲಿಲ್ಲ. ಇದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಇಲ್ಲಿ ಶಕ್ತಿಶಾಲಿ ಮುಖ್ಯಮಂತ್ರಿ ಇದ್ದು, ಅವರಿಗೆ ಪ್ರಕರಣದ ಮಾಹಿತಿ ಇರುತ್ತದೆ. ಅವರು ಅದನ್ನು ಬಹಿರಂಗಪಡಿಸಲಿ. ಇದು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವೂ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Share This Article