ದರ್ಶನ್ ಇರೋ ಠಾಣೆಗೆ ಶಾಮಿಯಾನ ಹಾಕಿದ್ದರ ಹಿಂದಿನ ಸೀಕ್ರೆಟ್ ರಿವೀಲ್

Public TV
1 Min Read
DARSHAN POLICE STATION

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ (Annapoorneshwari Police Station) ಶಾಮಿಯಾನ ಹಾಕಿದ್ದರ ಹಿಂದಿನ ನಿಜವಾದ ಕಾರಣ ರಿವೀಲ್ ಆಗಿದೆ.

ನಟ ದರ್ಶನ್ (Challenging Star Darshan), ಗೆಳತಿ ಪವಿತ್ರಾ ಗೌಡ (Pavithra Gowda) ಸಹಿತ ರೇಣುಕಾಸ್ವಾಮಿ (Renukaswamy Case) ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ 15 ಮಂದಿ ಆರೋಪಿಗಳು ಅನ್ನಪೂರ್ಣೇಶ್ವರಿ ನಗರ ಪೊಲಿಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ನಡುವೆ ನಿನ್ನೆ (ಗುರುವಾರ) ಏಕಾಏಕಿ ಪೊಲೀಸ್ ಠಾಣೆಯ ಆವರಣದ ಗೋಡೆಗೆ ಶಾಮಿಯಾನ ಹಾಕಲಾಗಿತ್ತು. ಈ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ANNAPOORNESHWARI POLICE STATION

ಈ ಬೆನ್ನಲ್ಲೇ ಇದೀಗ ದರ್ಶನ್ & ಗ್ಯಾಂಗ್‍ಗೆ ವಿಐಪಿ ಟ್ರೀಟ್‍ಮೆಂಟ್ ಹಿಂದಿನ ಸೀಕ್ರೆಟ್ ಬಯಲಾಗಿದೆ. ಶಾಮಿಯಾನದ ಸೈಡ್ ವಾಲ್ ಹಾಕಿಸಿದ್ದು ನಟ ದರ್ಶನ್‍ಗಾಗಿಯೇ ಎಂಬುದು ಇದರ ಹಿಂದಿನ ಸತ್ಯವಾಗಿದೆ. ಪೊಲೀಸರ ಮುಂದೆ ದರ್ಶನ್ ಮನವಿ ಹಿನ್ನೆಲೆಯಲ್ಲಿ ಪೊಲೀಸರು ಈ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ದರ್ಶನ್ ಇರೋ ಪೊಲೀಸ್ ಠಾಣೆ ಬಳಿ 144 ಸೆಕ್ಷನ್- ವಾಹನ ಸವಾರರ ಪರದಾಟ

ದರ್ಶನ್ ಹೇಳಿದ್ದೇನು..?: ಸಾರ್ ನನಗೆ ಒಂದೇ ಕಡೆ ಕುಳಿತು ಇರಲು ಆಗುತ್ತಿಲ್ಲ. ನಾನು ವಾಕ್ ಮಾಡಬೇಕು ನನ್ನ ಕೈಲಿ ಆಗ್ತಿಲ್ಲ. ನಾನು ಬಾಡಿ ರಿಲ್ಯಾಕ್ಸ್ ಮಾಡಬೇಕು. ಸಿಗರೇಟ್ ಇಲ್ಲವಾದ್ರೆ ನನಗೆ ಕೈ ನಡುಗುತ್ತೆ. ನೀವು ಪದೇ ಪದೇ ಪ್ರಶ್ನೆ ಮಾಡುತ್ತಲೇ ಇದ್ದೀರಿ. ನಾನು ಎಷ್ಟು ಸಲ ಹೇಳಲಿ ನನಗೆ ಏನು ಗೊತ್ತಿಲ್ಲ ಅಂತಾ. ಪದೇ ಪದೇ ಅದೇ ಪ್ರಶ್ನೆ ಕೇಳ್ತೀರಿ ಎಂದು ಪೊಲೀಸರ ಮುಂದೆ ದರ್ಶನ್ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಠಾಣೆ ಒಳಗೆ ತಿರುಗಾಡಲು ಜಾಗ ಇಲ್ಲ ಅದಕ್ಕೆ ಸೈಡ್ ವಾಲ್ ಹಾಕಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.

Share This Article