-32 ಸಾವಿರದಿಂದ 1.20 ಲಕ್ಷದೊಳಗೆ ವಾರ್ಷಿಕ ಆದಾಯ ಮಿತಿ ಹೊಂದಿದವರಿಗೆ ಅನ್ವಯ
ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಪರಿಶೀಲನೆಯ ನಂತರ 32 ಸಾವಿರ ರೂ.ಯಿಂದ 1.20 ಲಕ್ಷ ರೂ.ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರೆಸುವಂತೆ ಕಂದಾಯ ಇಲಾಖೆ (Revenue Department) ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ (G Parameshwar) ಅವರು ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಬಹಳ ದಿನಗಳಿಂದ ಇದೇ ಆದಾಯ ಮಿತಿಯಿದ್ದ ಕಾರಣ ಲಕ್ಷಾಂತರ ಜನರು ಪಿಂಚಣಿ ಸೌಲಭ್ಯದಿಂದ ಹೊರಗೆ ಉಳಿದಿದ್ದರು. ಈಗ 1.20 ಲಕ್ಷ ರೂ.ಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಸ್ಪಷ್ಟಪಡಿಸಿದ್ದಾರೆ.

