ಬೀದರ್: ಗಡಿ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿಂದು ರಾತ್ರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
Advertisement
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ಸಾವಿರಾರು ಜನರ ಅಹವಾಲುಗಳನ್ನು ಸ್ವೀಕಾರ ಮಾಡಲಿದ್ದಾರೆ. ಈಗಾಗಲೇ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಿಕ್ಕೆ ಕಲಾ ತಂಡಗಳು, ಅಲಂಕೃತ ಎತ್ತಿನ ಬಂಡಿ ಸಿದ್ದವಾಗಿವೆ. ಇದನ್ನೂ ಓದಿ: ಬಟದ್ರವ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಮುಖ ಆರೋಪಿ ಅರೆಸ್ಟ್
Advertisement
Advertisement
ಜಿಲ್ಲೆಯಾದ್ಯಂತ 25 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಸೇರುವ ನಿರೀಕ್ಷೆಯಿದೆ. ಆರ್ ಅಶೋಕ್ ಅವರ ಅಷ್ಟೇ ಅಲ್ಲದೇ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸರಿಗಮಪ ಖ್ಯಾತಿಯ ಹನುಮಂತ ಲಂಬಾಣಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡಲಾಗುತ್ತಿದೆ. ಇದನ್ನೂ ಓದಿ: ತಲೆಗೆ ಕಲರ್ ಹಾಕೋ ರೇಟ್ ವಿಚಾರಕ್ಕೆ ಜಗಳ- ಕತ್ತರಿಯಿಂದ ಇರಿದು ಗ್ರಾಹಕನ ಕೊಲೆ