ಬಳ್ಳಾರಿ: ಕಂದಾಯ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಸದಾಶಿವ ನಗರದಲ್ಲಿ ನಡೆದಿದೆ.
ಚೈತ್ರಾ (25) ಮೃತ ದುರ್ದೈವಿ. ಕೊಪ್ಪಳ ನಗರಸಭೆಯಲ್ಲಿ ಚೈತ್ರಾ ಕಂದಾಯ ಅಧಿಕಾರಿಯಾಗಿ ಕೆಲಸ ಮಾಡುತಿದ್ದರು. ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಗಂಡನ ಜೊತೆಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ ಗಂಡನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮಗನ ಆರೋಗ್ಯ ವಿಚಾರಿಸುತ್ತಾ ರಾತ್ರಿಯಿಡೀ ನಿದ್ದೆಗೆಟ್ಟ ಶಾರೂಖ್ ದಂಪತಿ!
ಚೈತ್ರಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಕಪಕ್ಕದ ಮನೆಯವರು ಹೇಳುವ ಪ್ರಕಾರ ಗಂಡ ಹೆಂಡತಿ ಇಬ್ಬರೂ ಚೆನ್ನಾಗಿಯೇ ಇದ್ದರು. ಇಬ್ಬರು ನಡುವೆ ಯಾವುದೇ ಜಗಳ ಗಲಾಟೆ ಇರಲಿಲ್ಲ. ಆದರೆ ಅವರ ಸಾವಿಗೆ ಬೇರೆ ಕಾರಣ ಇರಬಹುದು ಎನ್ನುವ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ