ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಲಾ ಶಿಕ್ಷಕರ ಸಂಘಟನೆಗಳ ನಿಯೋಗದ ಜೊತೆ ಸಭೆ ನಡೆಯಿತು. ಸಭೆಯಲ್ಲಿ ಹಲವು ಬೇಡಿಕೆಗಳನ್ನ ಶಿಕ್ಷಕರು ಮುಂದಿಟ್ಟಿದ್ದು, ಒಂದು ತಿಂಗಳ ಒಳಗಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ನೀಡಿದರು. ಇದನ್ನೂ ಓದಿ: ಕಳಸಾ-ಬಂಡೂರಿ ಕಾಮಗಾರಿ ಪ್ರಾರಂಭಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕಲು ಸಭೆ ಕರೆಯಿರಿ- ಸಿಎಂಗೆ ಕೋನರೆಡ್ಡಿ ಒತ್ತಾಯ
Advertisement
Advertisement
ಸಭೆಯಲ್ಲಿ ತಮ್ಮ ಬೇಡಿಕೆಗಳನ್ನ ನಿಯೋಗ ಸಿಎಂಗೆ ಮಂಡಿಸಿತು. 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು ಎಂದು ಹೇಳಿತು. ಇದನ್ನೂ ಓದಿ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ: ರಾಜ್ಯದಲ್ಲಿ 1 ಕೋಟಿ ನೋಂದಣಿ ಗುರಿ
Advertisement
ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆಂದು ಹಿಂಬಡ್ತಿ ನೀಡಲಾಗಿದೆ. ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಠತೆಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿತು. ನಿಯೋಗದ ಮನವಿ ಆಲಿಸಿದ ಸಿಎಂ ಒಂದು ತಿಂಗಳ ಒಳಗೆ ಸಮಸ್ಯೆ ಪರಿಹಾರ ನೀಡುವುದಾಗಿ ಭರವಸೆ ಕೊಟ್ಟರು. ಇದನ್ನೂ ಓದಿ: ಎದೆಮೂಳೆ ಮುರಿತ, ವೃಷಣಕ್ಕೆ ಹಾನಿ; 600 ರೂ.ನ ಮೆಗ್ಗಾರ್‌ನಿಂದ ಕರೆಂಟ್ ಶಾಕ್ ಕೊಟ್ಟು ಹಿಂಸೆ
Advertisement
ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa), ಬಡ್ತಿ, ಮುಂಬಡ್ತಿ ವಿಚಾರವಾಗಿ ಶಿಕ್ಷಕರ ಬೇಡಿಕೆಗಳು ಇತ್ತು. ಸಿಎಂ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ಆಗಿದೆ. ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚನೆ ಮಾಡಿ ಆ ಸಮಿತಿಯಲ್ಲಿ ಸಂಘಟನೆಯವರನ್ನು ಸೇರಿಸಿಕೊಂಡು ಸಮಸ್ಯೆ ಪರಿಹಾರ ಮಾಡುತ್ತೇವೆ. ಸಿಎಂ ಕೂಡಾ ಸಮಸ್ಯೆ ಪರಿಹಾರ ಮಾಡಲು ಸೂಚನೆ ನೀಡಿದ್ದಾರೆ. ಕಾನೂನಿನ ವಿಚಾರಗಳನ್ನ ನೋಡಿಕೊಂಡು ಆದಷ್ಟು ಬೇಗ ಒಂದು ತೀರ್ಮಾನ ಮಾಡುತ್ತೇವೆ. ಶಿಕ್ಷಕರಿಗೆ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಹರಿಯಾಣ ವಿಧಾನಸಭೆ ಚುನಾವಣೆ – ಆಪ್, ಕಾಂಗ್ರೆಸ್ ಮೈತ್ರಿ ಹಿಂದಿನ ಲೆಕ್ಕಾಚಾರ ಏನು?