ರಾಜೀನಾಮೆ, ನಿವೃತ್ತಿಯಿಂದ ತೆರವಾಗುತ್ತಿರುವ ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ

Public TV
2 Min Read
ELECTION COMMISSION OF INDIA

ಬೆಂಗಳೂರು: ರಾಜೀನಾಮೆ (Resignation) ಮತ್ತು ನಿವೃತ್ತಿಯಿಂದ (Retirement) ತೆರವಾಗುತ್ತಿರುವ ವಿಧಾನಪರಿಷತ್ತಿನ ಕೆಲವು ಪದವೀಧರ (Graduate) ಮತ್ತು ಶಿಕ್ಷಕರ (Teachers) ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ (Election Commission) ಸೂಚಿಸಿದೆ.

ನೈಋತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್ ಅವರ ರಾಜೀನಾಮೆಯಿಂದಾಗಿ 19-4-2023 ತಾರೀಖಿನಿಂದ ಸ್ಥಾನ ತೆರವಾಗಿದ್ದು, ಈ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ 21-06-2024ರವರೆಗೆ ಇದೆ. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದಾಗಿ 16-03-2023 ತಾರೀಖಿನಿಂದ ತೆರವಾಗಿರುವ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ 11-11-2026ರವರೆಗೆ ಇದೆ. ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ

21-06-2024ಕ್ಕೆ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ ಬಿ. ಪಾಟೀಲ್, 21-06-2024ಕ್ಕೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ, 21-06-2024ಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ಎ.ನಾರಾಯಣ ಸ್ವಾಮಿ, 21-06-2024ಕ್ಕೆ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್. ಭೋಜೆಗೌಡ, 21-06-2024ಕ್ಕೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ನಿವೃತ್ತಿಯಾಗುತ್ತಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲಿ ಅಂಗೀಕಾರವಾಗಿದ್ದ 4 ಮಸೂದೆಗಳಿಗೆ ರಾಷ್ಟ್ರಪತಿ ಸಹಿ

ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕ ನೋಟಿಸ್ ಅನ್ನು ಸೆ.30 ರಂದು ಪ್ರಕಟಣೆ ಮಾಡಬೇಕಾಗಿದೆ. ಫಾರಂ 18 ಅಥವಾ 19ರಲ್ಲಿ ಅರ್ಜಿ ಸ್ವೀಕರಿಸಲು ನ.06 ಕೊನೆಯ ದಿನವಾಗಿದೆ. ಮತದಾರರ ಕರಡು ಪ್ರತಿ ಪ್ರಕಟಿಸುವ ದಿನ ನ.23, ಮತದಾರರ ಪಟ್ಟಿ ಪ್ರಕಟಣೆ ದಿನ ನ.23, ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಲು ನ.23 ರಿಂದ ಡಿ.09 ರವರೆಗೆ ಅವಕಾಶವಿದೆ. ಇದನ್ನೂ ಓದಿ: ಇಳಕಲ್‌ ಸೀರೆಯಲ್ಲಿ ಅರಳಿತು ರಾಷ್ಟ್ರಧ್ವಜ, ಚಂದ್ರಯಾನ -3

ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ನಿವಾರಿಸಿ ಪೂರಕ ಪ್ರತಿಗಳನ್ನು ಸಿದ್ಧಪಡಿಸಿ ಪ್ರಕಟಿಸಲು ಡಿ.25 ಹಾಗೂ ಮತದಾರರ ಅಂತಿಮ ಪಟ್ಟಿ ಪ್ರಕಟಿಸುವ ದಿನಾಂಕ ಡಿ.30 ಆಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಸಮಗ್ರ ನಿರ್ದೇಶನಗಳ ಅನ್ವಯ ಮಾಡತಕ್ಕದ್ದು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ಕಾಲಮಿತಿಯೊಳಗೆ ಜನನ-ಮರಣ ಪ್ರಮಾಣ ಪತ್ರ ವಿತರಿಸಿ – ಡಿಸಿ ಖಡಕ್‌ ಸೂಚನೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article