Connect with us

Bollywood

ಡ್ರಗ್ಸ್ ಸೇವನೆ, ಮಾರಾಟ ಆರೋಪ- ರಿಯಾ ಚಕ್ರವರ್ತಿ ವಕೀಲ ಸ್ಪಷ್ಟನೆ

Published

on

-ಯಾವುದೇ ಪರೀಕ್ಷೆಗೆ ರಿಯಾ ಸಿದ್ಧ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊರ ತಿರುವು ಪಡೆದುಕೊಂಡಿದ್ದು, ಗೆಳತಿ ರಿಯಾ ಚಕ್ರವರ್ತಿ ಡ್ರಗ್ಸ್ ಸೇವನೆ ಮಾಡುತ್ತಿದ್ರು ಮತ್ತು ಕಲೆ ಡೀಲರ್ ಗಳ ಜೊತೆ ಸಂಪರ್ಕ ಹೊಂದಿರುವ ಬಗ್ಗೆ ವರದಿಗಳ ಪ್ರಕಟವಾಗಿದೆ. ಡ್ರಗ್ಸ್ ಸೇವನೆ ಸಂಬಂಧ ರಿಯಾ ವಿರುದ್ಧ ಕೇಳಿ ಬಂದಿರುವ ಎಲ್ಲ ಆರೋಪಗಳಿಗೆ ವಕೀಲ ಸತೀಶ್ ಮಾನಿಶ್ಚಂದ್ ಸ್ಪಷ್ಟನೆ ನೀಡಿದ್ದಾರೆ.

ರಿಯಾ ತಮ್ಮ ಜೀವನದಲ್ಲಿ ಡ್ರಗ್ಸ್ ಸೇವನೆ ಮಾಡಿಯೇ ಇಲ್ಲ. ಯಾವುದೇ ಸಮಯದಲ್ಲಿ ಯಾವುದೇ ವೇಳೆ ಪರೀಕ್ಷೆ ಮಾಡಿಸಿಕೊಳ್ಳಲು ಸಿದ್ಧರಿದ್ದಾರೆ ಎಂದು ರಿಯಾ ವಿರುದ್ಧ ಕೇಳಿ ಬಂದಿರುವ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಇದನ್ನೂ ಓದಿ: ಸರ್ ನಿಧನದ ಬಳಿಕ ಮನೆಯಲ್ಲಿದ್ದ ಡ್ರಗ್ ಸಿಗರೇಟ್  ರೋಲ್ ಮಾಯವಾಯ್ತು: ಸುಶಾಂತ್ ಮನೆಯ ಕುಕ್ 

ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸುಶಾಂತ್ ಆಪ್ತ ಸಿದ್ಧಾರ್ಥ್ ಪಿಠಾಣಿಯನ್ನ ತೀವ್ರ ವಿಚಾರಣೆಗೆ ಒಳಪಡಿಸಿದೆ. ಸತತ ಆರು ದಿನಗಳಿಂದ ಸಿದ್ಧಾಥ್ ಪಿಠಾಣಿ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ. ರಿಯಾಗೂ ಸಹ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಮಾಧ್ಯಮಗಳ ವರದಿ ಮಾಡಿವೆ. ಆದ್ರೆ ರಿಯಾ ಪರ ವಕೀಲ ತಮ್ಮ ಕಕ್ಷಿದಾರರಿಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಶಾಂತ್ ಸಾವಿಗೆ ಭೂಗತ ಲೋಕದ ಲಿಂಕ್: ಸುಬ್ರಮಣಿಯನ್ ಸ್ವಾಮಿ

Click to comment

Leave a Reply

Your email address will not be published. Required fields are marked *