ಜೈಪುರ: ಗುಜರಾತಿ ಯುವತಿ ರಿಯಾ ಸಿಂಘಾ (Rhea Singha) ‘ಮಿಸ್ ಯೂನಿವರ್ಸ್ ಇಂಡಿಯಾ 2024’ (Miss Universe India 2024) ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್ ಯೂನಿವರ್ಸ್ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಖುಷಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪ್ಯಾಲೆಸ್ತೀನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ – ಗಾಜಾ ಪರಿಸ್ಥಿತಿ ಬಗ್ಗೆ ಭಾರತ ಕಳವಳ
Advertisement
Advertisement
ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಹೋಗಲು ನಾನು ತುಂಬಾ ಕೆಲಸ ಮಾಡಿದ್ದೇನೆ. ಈ ಕಿರೀಟಕ್ಕೆ ನಾನು ಸಾಕಷ್ಟು ಅರ್ಹಳೆಂದು ಪರಿಗಣಿಸಬಹುದು. ಹಿಂದಿನ ವಿಜೇತರಿಂದ ನಾನು ತುಂಬಾ ಸ್ಫೂರ್ತಿ ಪಡೆದಿದ್ದೇನೆ ಎಂದು ಗೆಲುವಿನ ಬಳಿಕ ಪ್ರತಿಕ್ರಿಯಿಸಿದ್ದಾರೆ.
Advertisement
ನಟಿ ಮತ್ತು ಮಿಸ್ ಯೂನಿವರ್ಸ್ ಇಂಡಿಯಾ 2015, ಊರ್ವಶಿ ರೌಟೇಲಾ ಈವೆಂಟ್ನಲ್ಲಿ ತೀರ್ಪುಗಾರರಾಗಿದ್ದರು. ಭಾರತವು ಈ ವರ್ಷ ಮತ್ತೆ ವಿಶ್ವ ಸುಂದರಿ ಕಿರೀಟವನ್ನು ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ
Advertisement
ಎಲ್ಲಾ ಹುಡುಗಿಯರ ಭಾವನೆ ಏನೆಂದು ನಾನು ಭಾವಿಸುತ್ತೇನೆ. ವಿಜೇತರು ಮನಮುಟ್ಟುತ್ತಾರೆ. ಅವರು ವಿಶ್ವ ಸುಂದರಿ ಸ್ಪರ್ಧೆಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸುತ್ತಾರೆ. ಭಾರತವು ಈ ವರ್ಷ ಮತ್ತೆ ವಿಶ್ವ ಸುಂದರಿ ಕಿರೀಟವನ್ನು ಗೆಲ್ಲುತ್ತದೆ ಎಂಬ ಭರವಸೆ ನನಗಿದೆ. ಎಲ್ಲಾ ಹುಡುಗಿಯರು ಕಷ್ಟಪಟ್ಟಿದ್ದಾರೆ ಎಂದು ರೌಟೇಲಾ ಪ್ರತಿಕ್ರಿಯಿಸಿದ್ದಾರೆ.
ರಿಯಾ ಸಿಂಘಾ ಈಗ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ತಯಾರಿ ನಡೆಸುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಈವೆಂಟ್ ನಡೆಯಲಿದೆ.