LatestMain PostNational

ಅಡುಗೆ ಮಾಡುವ ಮುನ್ನ ಅಕ್ಕಿ ತೊಳೆದಿರಲಿಲ್ಲ- 31 ವಿದ್ಯಾರ್ಥಿಗಳು ಅಸ್ವಸ್ಥ

ಹೈದರಾಬಾದ್: ಸರ್ಕಾರಿ ಶಾಲೆಯ (Govt School) ವಸತಿ ನಿಲಯದಲ್ಲಿ (Hostel) ರಾತ್ರಿ ಊಟ (Dinner) ಸೇವಿಸಿದ ಬಳಿಕ 31 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ (Hospital) ಸೇರಿರುವ ಘಟನೆ ತೆಲಂಗಾಣದ (Telangana) ಕುಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಕಾಗಜನಗರ ಪಟ್ಟಣದ ಬಾಲಕರ ವಸತಿ ಶಾಲೆಯ ವಿದ್ಯಾರ್ಥಿಗಳು ಸೋಮವಾರ ರಾತ್ರಿ ಊಟ ಮಾಡಿದ ಬಳಿಕ ಹೊಟ್ಟೆನೋವು, ವಾಂತಿಭೇದಿ ಕಾಣಿಸಿಕೊಂಡಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ಮಾಧ್ಯಮದವರು ಶಾಲೆಗೆ ಬಂದಿದ್ದಾರೆ ಆದರೆ ಸಿಬ್ಬಂದಿ ಅವರನ್ನು ಆವರಣಕ್ಕೆ ಪ್ರವೇಶಿಸಲು ಬಿಡಲಿಲ್ಲ.

ಬಳಿಕ ವಸತಿ ನಿಲಯದ ಸಿಬ್ಬಂದಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಹಿಂಬಾಗಿಲಿನಿಂದ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ತಮ್ಮ ವಾಹನಗಳಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲೂ ಇದೆ ಐಸಿಸ್‌ ಗ್ಯಾಂಗ್‌ – ಮೂವರು ಶಂಕಿತ ಉಗ್ರರ ವಿರುದ್ಧ ಎಫ್‌ಐಆರ್

ವಸತಿ ನಿಲಯದಲ್ಲಿ ಸಿಬ್ಬಂದಿ ಕೊರತೆಯಿರುವುದರಿಂದ ಅಡುಗೆ ಮಾಡುವ ಮುನ್ನ ಅಕ್ಕಿಯನ್ನು ತೊಳೆದಿರಲಿಲ್ಲ. ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಕ್ರಿಮಿ ಕೀಟಗಳು ಕಾಣಿಸಿಕೊಂಡಿರುವ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ, ಘಟನೆಯ ಕುರಿತು ತನಿಖೆಗೆ ಆದೇಶ ನೀಡಲಾಗಿದೆ ಎಂದು ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ(ಡಿಎಂಹೆಚ್‌ಒ) ಪ್ರಭಾಕರ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಹೊಟ್ಟೆಯಲ್ಲಿ 1 ಕೆ.ಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ವ್ಯಕ್ತಿಯ ಬಂಧನ

Live Tv

Leave a Reply

Your email address will not be published.

Back to top button