ಲಂಡನ್: ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಬಿಸಿ (BBC) ಮುಖ್ಯಸ್ಥ ಹುದ್ದೆಗೆ ರಿಚರ್ಡ್ ಶಾರ್ಪ್ (Richard Sharp) ರಾಜೀನಾಮೆ ನೀಡಿದ್ದಾರೆ.
ಇಂಗ್ಲೆಂಡ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ಅವರಿಗೆ 8 ಲಕ್ಷ ಪೌಂಡ್ (ಅಂದಾಜು 8.15 ಕೋಟಿ ರೂ.) ಸಾಲದ ಗ್ಯಾರಂಟಿ ನೀಡಲು ರಿಚರ್ಡ್ ಶಾರ್ಪ್ ನೆರವಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು
Advertisement
Advertisement
ಕೆಲ ತಿಂಗಳ ಹಿಂದೆ ಸಂಡೆ ಟೈಮ್ಸ್ ರಿಚರ್ಡ್ ಶಾರ್ಪ್ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಬೋರಿಸ್ ಜಾನ್ಸನ್ ಮತ್ತು ರಿಚರ್ಡ್ ಶಾರ್ಪ್ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ನಮಾಜ್ – 1,700 ಮುಸ್ಲಿಂ ಮುಖಂಡರ ವಿರುದ್ಧ ಕೇಸ್
Advertisement
Advertisement
ಈ ಅದ್ಭುತ ಸಂಸ್ಥೆಯ ಅಧ್ಯಕ್ಷರಾಗಿರುವುದು ಒಂದು ಗೌರವ ಎಂದು ರಿಚರ್ಡ್ ಶಾರ್ಪ್ ಹೇಳಿದ್ದಾರೆ. ಹೊಸ ಮುಖ್ಯಸ್ಥರ ಆಯ್ಕೆಯಾಗುವವರೆಗೂ ರಿಚರ್ಡ್ ಶಾರ್ಪ್ ಮುಖ್ಯಸ್ಥರಾಗಿಯೇ ಮುಂದುವರಿಯಲಿದ್ದಾರೆ.