ರಾಯಚೂರು: ರೈಲ್ವೇ (Railway) ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ಕೆರೆಯಂತಾಗಿದ್ದರಿಂದ ಸವಾರನೊಬ್ಬ ಸಿನಿಮಾ ಶೈಲಿಯಲ್ಲಿ ಬೈಕ್ (Bike) ಹೊತ್ತುಕೊಂಡು ನಡೆದ ಘಟನೆ ರಾಯಚೂರಿನಲ್ಲಿ ನಡೆದಿದೆ.
ತಾಲೂಕಿನ ಶಕ್ತಿನಗರದ ಆರ್‌ಟಿಪಿಎಸ್ ಬಳಿಯ ರೈಲ್ವೇ ಅಂಡರ್‌ಪಾಸ್‌ನಲ್ಲಿ ಸಣ್ಣ ಮಳೆ ಬಂದರೂ ರಸ್ತೆಯಲ್ಲಿ ನೀರು ತುಂಬಿಕೊಳ್ಳುತ್ತದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈಗ ಅದೇ ರೀತಿ ನೀರು ನಿಂತಿದ್ದು, ಬೈಕ್ ಸವಾರ ತನ್ನ ಬೈಕ್‍ನ್ನು ಹೆಗಲ ಮೇಲೆ ಹೊತ್ತು ರಸ್ತೆ ದಾಟಿದ್ದಾನೆ. ಇದನ್ನೂ ಓದಿ: ದೇಶದಲ್ಲಿ ಶಾಂತಿ ಕಾಪಾಡಿ- ಆಸ್ಪತ್ರೆಯಿಂದಲೇ ಬೆಂಬಲಿಗರಿಗೆ ಚಂದ್ರಶೇಖರ್ ಆಜಾದ್ ಸಂದೇಶ
ಹಳೇ ಯದ್ಲಾಪುರ ರೈಲ್ವೇ ಅಂಡರ್‌ಪಾಸ್‌ನಲ್ಲಿ ಮಳೆ ನೀರು, ಗದ್ದೆಯ ನೀರು ಹಾಗೂ ಪಕ್ಕದ ಪವರ್ ಪ್ಲಾಂಟ್ ನೀರಿನಿಂದ ರಸ್ತೆ ಮಾರ್ಗ ಬಂದ್ ಆಗಿದೆ. ಹೀಗಾಗಿ ಶಕ್ತಿನಗರದಿಂದ ರಂಗಾಪುರ, ಗುರ್ಜಾಪುರ ಸೇರಿ ಹತ್ತಾರು ಹಳ್ಳಿಗಳಿಗೆ ಹೋಗುವ ಜನರಿಗೆ ತೊಂದರೆಯಾಗಿದೆ.
ಎಷ್ಟೋ ಬೈಕ್ ಸವರಾರು ಈ ಮಾರ್ಗದಲ್ಲಿ ಸಂಚರಿಸುವುದನ್ನೇ ನಿಲ್ಲಿಸಿದ್ದಾರೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದುಬೈನಲ್ಲಿ ತೈಲ ವ್ಯಾಪಾರ ಮಾಡ್ತಿದ್ದ ಉದ್ಯಮಿ ಕಾರು ಅಡ್ಡಗಟ್ಟಿ 95 ಲಕ್ಷ ರೂ. ದರೋಡೆ
Web Stories