ಚಾಮರಾಜನಗರ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತುರು ಬಳಿ ನಡೆದಿದೆ.
ಕುಂತುರಿನ ರಸ್ತೆಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದರಿಂದ ಬೈಕ್ ಸವಾರ ಬಸ್ ನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಹಿಂಬದಿ ಸವಾರರಿಗೆ ಗಂಭೀರ ಗಾಯಗಳಾಗಿವೆ. ಕೆಆರ್ ನಗರದ ಮೂವರು ಒಂದೇ ಬೈಕ್ ನಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಪ್ರಯಾಣ ಮಾಡುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ.
ಸದ್ಯ ಈ ಬಗ್ಗೆ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.