ಮೈಸೂರು: ವಾಹನ ತಪಾಸಣೆ ವೇಳೆ ಬೈಕ್ ಸವಾರ ದಿಢೀರನೆ ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ಮೈಸೂರು-ಶ್ರೀರಂಗಪಟ್ಟಣ ರಸ್ತೆಯಲ್ಲಿ ನಡೆದಿದೆ.
ಸುರೇಶ್(45) ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ. ಗಾಯಾಳು ಸುರೇಶ್ ಕುಂಬಾರಕೊಪ್ಪಲು ನಿವಾಸಿಯಾಗಿದ್ದು, ಸದ್ಯ ಕೆ.ಆರ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರೇ ಬೈಕಿಗೆ ಅಡ್ಡವಾಗಿ ಬ್ಯಾರಿಕೇಡ್ ಎಳೆದ ಆರೋಪ ಕೇಳಿ ಬರುತ್ತಿದ್ದು, ಸುರೇಶ್ ಗಾಬರಿಯಿಂದ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಕೆಳಗೆ ಬಿದ್ದ ಬೈಕ್ ಸವಾರನಿಗೆ ಆಲ್ಟೋ ಕಾರ್ ಡಿಕ್ಕಿ ಹೊಡೆದಿದೆ.
ಈ ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಅಲ್ಲದೇ ಸ್ಥಳೀಯರಿಂದ ಪೊಲೀಸರ ಜೊತೆ ಮಾತಿನ ಚಕಮಕಿ ಕೂಡ ನಡೆದಿದೆ. ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ಸದ್ಯ ಈ ಬಗ್ಗೆ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.