Bengaluru City

ಯಾರು ಎಲ್ಲಿ ಬೇಕಾದ್ರೂ ಹೋಗಲಿ: ವಿರೋಧಿಗಳಿಗೆ ಬಿಎಸ್‍ವೈ ತಿರುಗೇಟು

Published

on

Share this

ಬೆಂಗಳೂರು: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ಅಸಮಾಧಾನಿತರ ವಿರುದ್ಧ ಕೆಂಡಾಮಂಡಲವಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಯಾರು ಎಲ್ಲಿ ಬೇಕಾದ್ರೂ ಹೋಗಲಿ ಅಂತಾ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಏಪ್ರಿಲ್ 27ರ ಅಸಮಾಧಾನಿತರ ಸಭೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಪದಾಧಿಕಾರಿಗಳ ಪರಿಷ್ಕರಣೆ ಮಾಡದಿರೋದು ಅಶಿಸ್ತು ಎಂಬ ಈಶ್ವರಪ್ಪ ಹೇಳಿಕೆಗೂ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ತಿಳಿಸಿದ್ರು.

ಆಗಸ್ಟ್ ನಲ್ಲಿ ರಾಜ್ಯಕ್ಕೆ ಶಾ: ಆಗಸ್ಟ್ ನಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬಂದು ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ ಮೈಸೂರಿನ ಕಾರ್ಯಕಾರಿಣಿಗೆ ಅಮಿತ್ ಶಾ ಬರುವುದಿಲ್ಲ ಅಂತಾ ಸ್ಪಷ್ಟಪಡಿಸಿದ್ರು.

ಏಪ್ರಿಲ್ 23ರಂದು ಆತ್ಮಾವಲೋಕನ ಸಭೆ ಕರೆದಿದ್ದೇನೆ. ನಂಜನಗೂಡು, ಗುಂಡ್ಲುಪೇಟೆ ಬೈ ಎಲೆಕ್ಷನ್ ಸೋಲಿನ ಆತ್ಮಾವಲೋಕನ ನಡೆಯಲಿದೆ. ಶೆಟ್ಟರ್, ಈಶ್ವರಪ್ಪ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಮುಖಂಡರಿಗೆ ಆಹ್ವಾನ ನೀಡಿದ್ದೇವೆ ಅಲ್ಲಿ ಕುಳಿತು ಚರ್ಚಿಸುತ್ತೇವೆ ಅಂತೇಳಿದ್ರು.

ಇದನ್ನೂ ಓದಿ: ಅಶಿಸ್ತೇ ಬಿಜೆಪಿ ನಾಯಕರ ಶಿಸ್ತು: ಸಿಎಂ ವ್ಯಂಗ್ಯ

Click to comment

Leave a Reply

Your email address will not be published. Required fields are marked *

Advertisement
Advertisement