ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು, ಲೈಂಗಿಕ ಕಾರ್ಯಕರ್ತರ ಲಿಂಗದ ಗೌಪ್ಯತೆಯನ್ನು ಉಲ್ಲಂಘಿಸಬಾರದು. ಅವರ ಗುರುತನ್ನು ಬಹಿರಂಗಪಡಿಸಬಾರದು. ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವದಿಂದ ಕಾಣಬೇಕಿರುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದೆ ಎಂದು ಹೇಳಿದೆ. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ನಿಂತು ನಮಾಜ್- ವ್ಯಕ್ತಿಯ ಬಂಧನ
Advertisement
Advertisement
ಯುಐಡಿಎಐ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಗೆಜೆಟೆಡ್ ಅನ್ನು ರಾಜ್ಯ ಏಡ್ಸ್ ನಿಯಂತ್ರಣದ ಯೋಜನಾ ನಿರ್ದೇಶಕರು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯಲ್ಲಿ (ನ್ಯಾಕೊ) ಸಲ್ಲಿಸಲಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ಯಮುನೋತ್ರಿ ದೇವಸ್ಥಾನದ ಹೆದ್ದಾರಿಯಲ್ಲಿ ಗೋಡೆ ಕುಸಿತ – 10 ಸಾವಿರ ಮಂದಿ ಸಂಕಷ್ಟದಲ್ಲಿ
Advertisement
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ(ನ್ಯಾಕೊ) ಅಥವಾ ರಾಜ್ಯ ಏಡ್ಸ್ ನಿಯಂತ್ರಣ ಸಂಘದ ಯೋಜನೆ ನಿರ್ದೇಶಕರು ಸಲ್ಲಿಸಿದ ಆಧಾರದಲ್ಲಿ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ನೀಡಬಹುದು. ವ್ಯಕ್ತಿ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿ, ಆ ವ್ಯಕ್ತಿಗೆ ಗೌರವ ನೀಡಬೇಕು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಎ.ಎಸ್. ಬೋಪಣ್ಣ ಅವರಿದ್ದ ಪೀಠ ತಿಳಿಸಿದೆ.