ಬೆಲ್ಜಿಯನ್: ಫಿಫಾ ವಿಶ್ವಕಪ್‍ನಲ್ಲಿ (FIFA World Cup) ಮೊರೊಕ್ಕೊ (Morocco) ವಿರುದ್ಧ ಬೆಲ್ಜಿಯಂ (Belgium) ಸೋತ ಬೆನ್ನಲ್ಲೇ ಬೆಲ್ಜಿಯನ್‍ನಲ್ಲಿ ಅಭಿಮಾನಿಗಳು ರೊಚ್ಚಿಗೆದ್ದು ಹಿಂಸಾಚಾರಕ್ಕಿಳಿದಿದ್ದಾರೆ.
Advertisement
ಬೆಲ್ಜಿಯಂ ವಿರುದ್ಧ ಮೊರೊಕ್ಕೊ 2-0 ಅಂತರದಲ್ಲಿ ಗೆದ್ದ ಬೆನ್ನಲ್ಲೇ ಇತ್ತ ಬೆಲ್ಜಿಯಂ ರಾಜಧಾನಿ ಬೆಲ್ಜಿಯನ್‍ನಲ್ಲಿ ಫುಟ್‍ಬಾಲ್ ಅಭಿಮಾನಿಗಳು ಹಿಂಸಾಚಾರಕ್ಕೆ ಇಳಿದಿದ್ದಾರೆ. ರಸ್ತೆಯಲ್ಲಿದ್ದ ಕಾರ್, ಬೈಕ್‍ಗಳಿಗೆ ಬೆಂಕಿ ಇಟ್ಟು ಮೊರೊಕ್ಕೊ ದೇಶದ ಧ್ವಜವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!
Advertisement
Advertisement
ಫುಟ್‍ಬಾಲ್ ಅಭಿಮಾನಿಗಳ ಕೋಪಕ್ಕೆ ಹಿಂಸಾಚಾರ ಹೆಚ್ಚುತ್ತಿದ್ದಂತೆ ಬೆಲ್ಜಿಯಂ ಪೊಲೀಸರು 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಡಿದ ವರುಣ – 2ನೇ ಏಕದಿನ ಪಂದ್ಯ 12 ಓವರ್‌ಗಳಿಗೆ ಅಂತ್ಯ
Advertisement
ಹಿಂಸಾಚಾರಕ್ಕೆ ಇಳಿದ ಗುಂಪೊಂದು ರಾಷ್ಟ್ರೀಯ ಹೆದ್ದಾರಿಗಿಳಿದು ದಾಂಧಲೆಗೆ ಮುಂದಾಗಿದೆ. ಘಟನೆಯಲ್ಲಿ ಪತ್ರಕರ್ತರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಪೊಲೀಸರು ಹಿಂಸಾಚಾರದ ಸ್ಥಳದಲ್ಲಿ ಟಿಯರ್ ಗ್ಯಾಸ್ ಹಾಗೂ ನೀರು ಸಿಂಪಡಿಸಿ ಜನರನ್ನು ಚದುರಿಸಿದ್ದಾರೆ. ಈಗಾಗಲೇ ಬೆಲ್ಜಿಯನ್‍ನಲ್ಲಿ ಹಲವು ನಿರ್ಬಂಧಗಳನ್ನು ಹೊರಡಿಸಲಾಗಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.