ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಕೇಸ್‌ಗಳಿಂದಾಗಿ ಕರ್ನಾಟಕ ರಾಜ್ಯ ಸರ್ಕಾರ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ಕಚೇರಿಗಳು, ವಿದ್ಯಾ ಸಂಸ್ಥೆಗಳು, ಕಾಲೇಜುಗಳು ಹಾಗೂ ಅಪಾರ್ಟ್ಮೆಂಟ್‌ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಕೋವಿಡ್ 19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್‌ಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆ ಪ್ರಕಟಿಸಿದೆ.
Advertisement
Advertisement
ಮಾರ್ಗಸೂಚಿಯಲ್ಲೇನಿದೆ?
ವಸತಿ ಸಮುಚ್ಚಯ ಅಥವಾ ಅಪಾರ್ಟ್ಮೆಂಟ್‌ಗಳಲ್ಲಿ 3-5 ಪ್ರಕರಣ ದಾಖಲಾದಲ್ಲಿ ಸಣ್ಣ ಕ್ಲಸ್ಟರ್ ಎಂದು ಪರಿಗಣಿಸಬೇಕು. 15ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾದಲ್ಲಿ ಎಲ್ಲರಿಗೂ ರ‍್ಯಾಪಿಡ್ ಟೆಸ್ಟ್ ಮಾಡಿಸಲಾಗುವುದು. ಸೋಂಕಿನ ಲಕ್ಷಣ ಇಲ್ಲದಿದ್ದರೆ, ಕೊರೊನಾ ಟೆಸ್ಟ್ ಅಗತ್ಯವಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಹೆಚ್ಚಿದ ಕೊರೊನಾ ಸೋಂಕು – ರಾಜ್ಯದಲ್ಲಿಂದು 900ಕ್ಕೂ ಹೆಚ್ಚು ಪ್ರಕರಣ ದಾಖಲು
Advertisement
Advertisement
ಮನೆ ಕೆಲಸದವರು 60 ವರ್ಷಕ್ಕಿಂತ ಕೆಳಗಿನವರಾಗಿರಬೇಕು. ಮನೆ ಕೆಲಸಗಾರರು, ಸಿಬ್ಬಂದಿ ಎನ್ 95 ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. ಕೊರೊನಾ ಪತ್ತೆಯಾದಲ್ಲಿ ಪಾರ್ಕ್, ಸ್ವಿಮ್ಮಿಂಗ್ ಪೂಲ್, ಕ್ಲಬ್ ಹೌಸ್‌ಗಳನ್ನು ಮುಚ್ಚಬೇಕು. ಸೋಂಕು ಕಂಡು ಬಂದ ಫ್ಲೋರ್ ಹಾಗೂ ಅಪಾರ್ಟ್ಮೆಂಟ್‌ಗಳನ್ನು ಸೀಲ್‌ಡೌನ್ ಮಾಡಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರೈತ
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ತಗುಲಿದರೆ ಅವರು ಕಡ್ಡಾಯವಾಗಿ ರಜೆ ತೆಗೆದುಕೊಳ್ಳಬೇಕು. ಈ ಎಲ್ಲಾ ಮಾರ್ಗಸೂಚಿಗಳು ಖಾಸಗಿ ಕಚೇರಿಗಳಿಗೂ ಅನ್ವಯವಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.