ಚಿತ್ರದುರ್ಗ: ಕೊರೊನಾ ಲಸಿಕೆ ಬೇಡವೆಂದು ಮನೆ ಏರಿ ಕುಳಿತಿದ್ದ ಯುವಕನ ಮನವೊಲಿಸಿ ಕೊರೊನಾ ಲಸಿಕೆ ನೀಡುವಲ್ಲಿ ಚಳ್ಳಕೆರೆ ತಹಶೀಲ್ದಾರ್ ರಘುಮೂರ್ತಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್. ದೇವರಹಳ್ಳಿ ಗ್ರಾಮದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
Advertisement
Advertisement
ಈ ವೇಳೆ ಒಂದು ಹಾಗೂ ಎರಡನೇ ಹಂತದ ಲಸಿಕೆ ಪಡೆಯದ ವ್ಯಕ್ತಿಗಳನ್ನು ಗುರುತಿಸಿ ಅಂತಹವರಿಗೆ ವ್ಯಾಕ್ಸಿನ್ ನೀಡಲಾಗುತ್ತಿತ್ತು. ಆಗ ಮಂಜುನಾಥ್ ಎಂಬ ಯುವಕ ಮೊದಲನೆ ಲಸಿಕೆ ಪಡೆದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು ಲಸಿಕೆ ಹಾಕಲು ಹೋದಾಗ, ಮಂಜುನಾಥ್ ನನಗೆ ಲಸಿಕೆ ಬೇಡ ಎಂದು ಹಠ ಹಿಡಿದು ಮನೆ ಏರಿ ಕುಳಿತಿದ್ದನು. ಇದನ್ನೂ ಓದಿ: ಬಿಜೆಪಿ ತನ್ನ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ: ಉದ್ಧವ್ ಠಾಕ್ರೆ
Advertisement
ಆಗ ಸ್ಥಳಕ್ಕೆ ಧಾವಿಸಿದ ಚಳ್ಳಕೆರೆ ತಹಶೀಲ್ದಾರ್ ಎನ್. ರಘುಮೂರ್ತಿ ಹಾಗೂ ಆರೋಗ್ಯ ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರು, ಕುಟುಂಬಸ್ಥರ ನೇತೃತ್ವದಲ್ಲಿ ಯುವಕನನ್ನು ಮನವೊಲಿಸಿ ಮನೆ ಮೇಲಿನಿಂದ ಕೆಳಗೆ ಇಳಿಸಿಕೊಂಡು ಲಸಿಕೆಯನ್ನು ನೀಡಿದ್ದಾರೆ. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಇದ್ದರು. ಇದನ್ನೂ ಓದಿ: ಸಕಲೇಶಪುರದಲ್ಲಿ ಕಲ್ಲು ಎತ್ತಿ ಹಾಕಿ ವೃದ್ಧೆಯ ಬರ್ಬರ ಹತ್ಯೆ