– ಡಿಸಿಎಂ ಭೇಟಿಯಾದ ಕಾಂತಾರ ನಟ
ಕಾಂತಾರ ಚಾಪ್ಟರ್ 1 (Kantara Chapter 1) ಸಕ್ಸಸ್ ಬೆನ್ನಲ್ಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರಿಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಡಿಕೆಶಿ, ರಿಷಬ್ ಜೊತೆಗಿನ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಇಂದು (ನ.19) ನನ್ನ ಗೃಹಕಚೇರಿಯಲ್ಲಿ ಖ್ಯಾತ ನಟ ರಿಷಬ್ ಶೆಟ್ಟಿಯವರು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಈ ವೇಳೆ ಕಾಂತಾರ: ಒಂದು ದಂತಕಥೆ – ಅಧ್ಯಾಯ 1ರ ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ ಶ್ಲಾಘನೀಯ. ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಅವರು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಮೋದಿ ಪಾದವನ್ನು ಮುಟ್ಟಿ ನಮಸ್ಕರಿಸಿದ ಐಶ್ವರ್ಯಾ ರೈ ಬಚ್ಚನ್
ಡಿಕೆಶಿ ಅವರನ್ನು ರಿಷಬ್ ಶೆಟ್ಟಿ ಭೇಟಿಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭೇಟಿಯಾಗಿರುವುದಕ್ಕೆ ನಿಖರ ಕಾರಣದ ಬಗ್ಗೆ ರಿಷಬ್ ಎಲ್ಲಿಯೂ ಹೇಳಿಕೊಂಡಿಲ್ಲ.
ಖ್ಯಾತ ನಟ @shetty_rishab ಯವರು ಇಂದು ನನ್ನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ ‘ಕಾಂತಾರ: ಒಂದು ದಂತಕಥೆ – ಅಧ್ಯಾಯ 1’ ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ… pic.twitter.com/4BoRLysGvS
— DK Shivakumar (@DKShivakumar) November 19, 2025
ಸದ್ಯ ಕಾಂತಾರ: ಚಾಪ್ಟರ್ 1 ಯಶಸ್ವಿ ಪ್ರದರ್ಶನ ಕಂಡಿದ್ದು, ಸುಮಾರು 850 ಕೋಟಿ ರೂ.ಗೂ ಅಧಿಕ ಹಣವನ್ನು ಗಳಿಸಿದೆ. ಕೆಜಿಎಫ್ 2 ನಂತರ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡ ಸಿನಿಮಾ ಎಂಬ ಖ್ಯಾತಿಯನ್ನು ಗಿಟ್ಟಿಸಿಕೊಂಡಿದೆ. ಅಲ್ಲದೆ, 2025ರಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆ ಈ ಚಿತ್ರಕ್ಕಿದೆ.ಇದನ್ನೂ ಓದಿ: ʻರಾಣಿ ಚೆನ್ನಾಭೈರಾದೇವಿʼ ಆಗ್ತಾರಾ ನಟಿ ರಮ್ಯಾ..?


