`ಕಾಂತಾರ’ (Kantara) ಸಕ್ಸಸ್ ನಂತರ ಸದ್ಯ ರಿಷಬ್ ಶೆಟ್ಟಿ (Rishab Shetty) ಗೋವಾದಲ್ಲಿ ಬೀಡು ಬಿಟ್ಟಿದ್ದಾರೆ. ಗೋವಾದಲ್ಲಿ ಅಂತರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ದೇವರು ಅಂದರೆ ನಿಮ್ಮ ಗ್ರಹಿಕೆ ಏನು ಎಂದು ಕೇಳಿದ್ದಾರೆ.
Advertisement
ನಿನ್ನೇಯಷ್ಟೇ ಗೋವಾ ಸಿಎಂ ಪ್ರಮೋದ್ ಸಾವಂತ್ (Goa Cm Pramod Sawat) ಅವರನ್ನು ರಿಷಬ್ ಶೆಟ್ಟಿ ಭೇಟಿಯಾಗಿದ್ದರು. ಇದೀಗ ಗೋವಾದ ಅಂತರಾಷ್ಟೀಯ ಸಿನಿಮೋತ್ಸವದಲ್ಲಿ ರಿಷಬ್ ಭಾಗಿಯಾಗಿದ್ದಾರೆ. ಹಲವು ವಿಚಾರಗಳ ಬಗ್ಗೆ ರಿಯಾಕ್ಟ್ ಮಾಡಿದ್ದಾರೆ. ದೇವರು, ದೈವದ ಕುರಿತು ನಟ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Advertisement
ನಾನು ಸಿನಿಮಾ ಮಾಡುವಾಗ ಯಾವ ಶೈಲಿಯ ಚಿತ್ರ ಮಾಡಬೇಕು ಎಂಬುದನ್ನು ಯೋಚಿಸುವುದಿಲ್ಲ. ನಾನು ಅಜ್ಜಿ ಹೇಳುವ ಕಥೆಗಳಿಂದ ಪ್ರಭಾವಕ್ಕೆ ಒಳಗಾಗಿದ್ದೇನೆ. ಹೀಗಾಗಿ, ಸ್ಕ್ರಿಪ್ಟ್ ಬರೆಯುವಾಗ ಅದನ್ನು ತಲೆಯಲ್ಲಿ ಇಟ್ಟುಕೊಂಡಿರುತ್ತೇನೆ ಎಂದು ರಿಷಬ್ ಮಾತನಾಡಿದ್ದಾರೆ.
Advertisement
ರಿಷಬ್ ಅವರು ಕಾಂತಾರ ಚಿತ್ರದಲ್ಲಿ ದೈವ ಹಾಗೂ ಭೂತಾರಾಧನೆಯ ವಿಚಾರಗಳನ್ನು ಹೇಳಿದ್ದಾರೆ. ಇದೆಲ್ಲವೂ ದೇವರಿಗೆ ಸಂಬAಧಿಸಿದ್ದು. ಹೀಗಾಗಿ, ಈ ಕುರಿತು ರಿಷಬ್ ಶೆಟ್ಟಿಗೆ ಪ್ರಶ್ನೆ ಎದುರಾಗಿದೆ. ದೇವರು ಅಂದರೆ ನಿಮ್ಮ ಗ್ರಹಿಕೆ ಏನು ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ರಿಷಬ್ ಸಿನಿಮಾ ದೇವರು. ನನಗೆ ಸಾಕಷ್ಟು ಜನಪ್ರಿಯತೆ ತಂದು ಕೊಟ್ಟಿದ್ದು ಸಿನಿಮಾ. ನನ್ನನ್ನು ಇಲ್ಲಿಯವರೆಗೆ ಕರೆ ತಂದಿದ್ದು ಸಿನಿಮಾ ಎಂದಿದ್ದಾರೆ ರಿಷಬ್. ಇದನ್ನೂ ಓದಿ: ಆರೋಗ್ಯದ ಬಗ್ಗೆ ಮತ್ತೆ ಸುಳ್ಳು ವದಂತಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸಮಂತಾ ರಾಂಗ್
ಹೊಂಬಾಳೆ ಸಂಸ್ಥೆಯಡಿ `ಕಾಂತಾರ’ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಸಿನಿಮಾ 400 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಈ ಚಿತ್ರ ಈಗ ಒಟಿಟಿಯಲ್ಲಿ ರಿಲೀಸ್ ಆಗಿ ಅಬ್ಬರಿಸುತ್ತಿದೆ. `ವರಾಹ ರೂಪಂ’ ಹಾಡು ವಿವಾದ ಸೃಷ್ಟಿ ಮಾಡಿತ್ತು. ಈಗ ಈ ಹಾಡಿನ ಟ್ಯೂನ್ ಬದಲಿಸಿ ಒಟಿಟಿಯಲ್ಲಿ ರಿಲೀಸ್ ಮಾಡಲಾಗಿದೆ.