ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ಕುಟುಂಬದೊಂದಿಗೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ (Kateel Durga Parameshwari) ಭೇಟಿ ನೀಡಿದ್ದಾರೆ. ಈ ವೇಳೆ, ‘ಕಾಂತಾರ 2’ (Kantara 2) ಸಿನಿಮಾ ಕೊನೆಯ ಹಂತದಲ್ಲಿದೆ ಎಂದು ಪ್ರಾಜೆಕ್ಟ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮಹಿಳಾ ಕಲಾವಿದರಿಗೂ ಆದ್ಯತೆ ಕೊಡಬೇಕು: ನಟಿಯರ ಸಂಭಾವನೆ ಬಗ್ಗೆ ರಮ್ಯಾ ಬೇಸರ
ಕಟೀಲು ಶ್ರೀದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಪತ್ನಿ ಹಾಗೂ ಮಕ್ಕಳೊಂದಿಗೆ ರಿಷಬ್ ಶೆಟ್ಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನಟ, ‘ಕಾಂತಾರ 2’ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಹಾಗಾಗಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಫಿಲ್ಮ್ ಫೆಸ್ಟಿವಲ್‌ನಲ್ಲಿ ಡಿಸಿಎಂ ಡಿಕೆಶಿ ಕಲಾವಿದರಿಗೆ ನಟ್ಟು ಬೋಲ್ಟು ಟೈಟ್ ಮಾಡೋ ವಿವಾದಕ್ಕೆ ಪ್ರತಿಕ್ರಿಯಿಸಿ, ನಾನು ಚಿತ್ರದ ಶೂಟಿಂಗ್‌ನಲ್ಲಿದ್ದೇನೆ ಆ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.