ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ಭೇಟಿ
`ಕಾಂತಾರ’ (Kantara) ಚಿತ್ರದ ಸೂಪರ್ ಸಕ್ಸಸ್ ನಂತರ ರಿಷಬ್ ಶೆಟ್ಟಿ,(Rishab Shetty) ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ರಿಷಬ್ ಸಿನಿಮಾ ದೇಶದ ಏಲ್ಲೆಡೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದೇ ಖುಷಿಯಲ್ಲಿ ಕಟೀಲು ಸನ್ನಿಧಾನಕ್ಕೆ ನಟ ಭೇಟಿ ನೀಡಿದ್ದಾರೆ.
ಚಿತ್ರರಂಗದಲ್ಲಿ `ಕಾಂತಾರ’ ಹವಾ ಜೋರಾಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿದ ನಂತರವೂ ಒಟಿಟಿಯಲ್ಲಿ ಕೂಡ ಸಿನಿಮಾ ಸೌಂಡ್ ಮಾಡುತ್ತಿದೆ. ಸದ್ಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ (Kateel Durgaparameshwari Temple) ಭೇಟಿ ನೀಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಕನ್ನಡದ ಹುಡುಗಿ, ಬ್ಯಾನ್ ಯಾಕೆ ಮಾಡಬೇಕು: ಧನಂಜಯ್
`ಕಾಂತಾರ’ ನಿನಿಮಾ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕಟೀಲಿಗೆ ರಿಷಬ್ ದಂಪತಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಳದ ವತಿಯಿಂದ ರಿಷಬ್ ಶೆಟ್ಟಿಗೆ ಆತ್ಮೀಯ ಗೌರವ ನೀಡಲಾಗಿದ್ದು, ದೇವರ ಶೇಷ ವಸ್ತ್ರ, ಪ್ರಸಾದ ನೀಡಿ ಆಡಳಿತ ಮಂಡಳಿ ಗೌರವ ಸೂಚಿಸಿದೆ. ಬಳಿಕ ನೆಚ್ಚಿನ ನಟನ ಜೊತೆ ದೇವಸ್ಥಾನದ ಮುಂಭಾಗ ಸೆಲ್ಪಿ ಕ್ಲಿಕ್ಕಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.