ನರೇಂದ್ರ ಮೋದಿ (Narendra) ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಆಗುವುದಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇಂದು (ಭಾನುವಾರ) ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ (Prime Minister) ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಅವರಿಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ವಿಶ್ ಮಾಡಿದ್ದಾರೆ.
3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿಗೆ ಅಭಿನಂದನೆಗಳು. ಕೌಶಲ್ಯ, ಅಭಿವೃದ್ಧಿ, ಶಿಕ್ಷಣ ಮತ್ತು ದೇಶದ ಸುರಕ್ಷತೆಯ ಕಡೆಗಿನ ನಿಮ್ಮ ಬದ್ಧತೆಗೆ ನಾವು ಧನ್ಯರು ಎಂದು ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ, ನಿವೇದಿತಾ ಡಿವೋರ್ಸ್ ಬಗ್ಗೆ ರಾಗಿಣಿ ರಿಯಾಕ್ಷನ್
View this post on Instagram
ಅಂದಹಾಗೆ, ಪ್ರಮಾಣವಚನ ಸಮಾರಂಭಕ್ಕೆ ರಾಜ್ಯ, ದೇಶ ಹಾಗೂ ವಿದೇಶಿ ಗಣ್ಯರೂ ಸೇರಿದಂತೆ ಸುಮಾರು 9 ಸಾವಿರ ಗಣ್ಯಮಾನ್ಯರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ 3 ಹಂತಗಳಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಇನ್ನೂ ‘ಕಾಂತಾರ’ (Kantara) ಸಿನಿಮಾ ಸಕ್ಸಸ್ ನಂತರ ಕಾಂತಾರ ಚಾಪ್ಟರ್ 1 (Kantara Chapter 1) ಮತ್ತು ಹೊಸ ಸಿನಿಮಾಗಳ ನಿರ್ಮಾಣ ಕಾರ್ಯಗಳತ್ತ ರಿಷಬ್ ಶೆಟ್ಟಿ ತೊಡಗಿಸಿಕೊಂಡಿದ್ದಾರೆ.