ಲಂಡನ್: ನಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಪಂದ್ಯದಲ್ಲಿ ಟೆಸ್ಟ್ ಕ್ಯಾಪ್ ಧರಿಸಿದ್ದ ರಿಷಭ್ ಪಂತ್ ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲೇ 5 ಕ್ಯಾಚ್ ಪಡೆದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
3ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ವೇಳೆ ರಿಷಭ್ ಪಂತ್ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ ಕುಕ್, ಕೀಟನ್ ಜೆನ್ನಿಂಗ್ಸ್, ಒಲೀ ಪೋಪ್, ಕ್ರಿಸ್ ವೋಕ್ಸ್ ಮತ್ತು ಅದಿಲ್ ರಶೀದ್ ಕ್ಯಾಚ್ ಪಡೆದು ಮಿಂಚಿದರು. ಈ ಹಿಂದೆ ಟೀಂ ಇಂಡಿಯಾದ ನರೇನ್ ತಮ್ಹಾನೆ (1955), ಕಿರಣ್ ಮೋರೆ (1986), ನಮನ್ ಓಜಾ (2015) ತಂಡದ ಪರ ಈ ಸಾಧನೆ ಮಾಡಿದ್ದರು. ಉಳಿದಂತೆ ನಾನಾ ಜೋಶಿ (1951), ಚಂದ್ರಕಾಂತ್ ಪಟಾನ್ಕರ್ (1955) ಪಾದಾರ್ಪಣೆ ಪಂದ್ಯದಲ್ಲಿ 4 ಕ್ಯಾಚ್ ಪಡೆದಿದ್ದರು.
Advertisement
Fantastic cricket, both in front and behind the wickets. Congratulations @hardikpandya7 and @RishabPant777 on your respective 5 wicket hauls! Let’s nip this in the bud now. #ENGvIND pic.twitter.com/lNDVRbQFPc
— Sachin Tendulkar (@sachin_rt) August 19, 2018
Advertisement
ವಿಶೇಷವೆಂದರೆ ಪಾದಾರ್ಪಣೆ ಪಂದ್ಯದ ಇನ್ನಿಂಗ್ಸ್ ಒಂದರಲ್ಲಿ 5 ಕ್ಯಾಚ್ ಪಡೆದ ಮೊದಲ ಏಷ್ಯನ್ ಆಟಗಾರ ಎಂಬ ಹೆಗ್ಗಳಿಕೆಯನ್ನು ರಿಷಭ್ ಪಂತ್ ಪಡೆದಿದ್ದಾರೆ. ಇದಕ್ಕೂ ಮುನ್ನ ಪಂದ್ಯದಲ್ಲಿ ರಿಷಭ್ ಎದುರಿಸಿದ 2ನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ರನ್ ಖಾತೆ ತೆರೆದಿದ್ದರು. ಅಲ್ಲದೇ ಸಿಕ್ಸರ್ ಮೂಲಕ ರನ್ ಖಾತೆ ತೆರೆದ ಟೀಂ ಇಂಡಿಯಾ ಮೊದಲ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದರು. ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 51 ಎಸೆತ ಎದುರಿಸಿದ ರಿಷಭ್ ಪಂತ್ 24 ರನ್ ಗಳಿಸಿ ಔಟಾಗಿದ್ದರು.
Advertisement
Wonderful effort by India to bowl out England in this extended 2nd session. Brilliant stuff from Pandya and the rest of bowlers for the probing lines and 168 is a very significant lead. Hope the batsman now capitalise and we have the match firmly in our control
— VVS Laxman (@VVSLaxman281) August 19, 2018
Advertisement
ಪಾಂಡ್ಯ 5 ವಿಕೆಟ್: ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಮೊದಲ ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಕೇವಲ 29 ಎಸೆತಗಳನ್ನು ಎಸೆದು 5 ವಿಕೆಟ್ ಪಡೆದ ಹಾರ್ದಿಕ್, ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಟೀಂ ಇಂಡಿಯಾ 2ನೇ ಆಟಗಾರ ಎಂಬ ಹೆಗ್ಗಳಿಕೆ ಪಡೆದರು. 2006 ಹಭರ್ಜನ್ ಸಿಂಗ್ ಸಿಂಗ್ ಕೇವಲ 27 ಎಸೆತಗಳನ್ನು ಹಾಕಿ 5 ವಿಕೆಟ್ ಪಡೆದಿದ್ದರು.
ಇಂಗ್ಲೆಂಡ್ ವಿರುದ್ಧ ಮೊದಲ ಎರಡು ಪಂದ್ಯಗಳಲ್ಲಿ ನೀರಸ ಪ್ರದರ್ಶನ ನೀಡಿದ್ದ ಪಾಂಡ್ಯ ಹಲವು ವಿಮರ್ಶೆಗಳನ್ನು ಎದುರಿಸಿದ್ದರು. ಸದ್ಯ ಪಾಂಡ್ಯ ತಮ್ಮ ಬೌಲಿಂಗ್ ಮೂಲಕ ವಿಮರ್ಶಕರಿಗೆ ತಿರುಗೇಟು ನೀಡಿದ್ದಾರೆ. ಪಾಂಡ್ಯ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 161 ರನ್ ಗಳಿಗೆ ಅಲೌಟ್ ಆಯಿತು. ಉಳಿದಂತೆ ಟೀಂ ಇಂಡಿಯಾ ಪರ ಜಸ್‍ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ ತಲಾ 2 ವಿಕೆಟ್ ಪಡೆದರು. 2ನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿದ್ದು, 292 ರನ್ ಮುನ್ನಡೆ ಪಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Congratulations to @hardikpandya7 for his maiden Test five-wicket haul! What a spell! ???? #ENGvIND pic.twitter.com/4ZX3PkHno2
— ICC (@ICC) August 19, 2018
Sunday was a successful day behind the stumps for @RishabPant777 – the third wicketkeeper ever to take 5+ catches in his maiden Test innings! #howzstat #ENGvIND pic.twitter.com/fFCfRCMWmw
— ICC (@ICC) August 20, 2018