ಡೆಹ್ರಾಡೂನ್: ಕಾರು ಅಪಘಾತದಲ್ಲಿ (Accident) ಗಾಯಗೊಂಡಿದ್ದ ಟೀಂ ಇಂಡಿಯಾ (Team India) ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ರಿಷಭ್ ಪಂತ್‍ರನ್ನು (Rishabh Pant) ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ (Mumbai) ಏರ್‌ಲಿಫ್ಟ್ ಮಾಡಲಾಗಿದೆ.
ಡಿ.30 ರಂದು ಮುಂಜಾನೆ ಉತ್ತರಾಖಂಡದಿಂದ ದೆಹಲಿಗೆ ಪಂತ್ ಹಿಂದಿರುಗುತ್ತಿದ್ದ ವೇಳೆ ಹಮ್ಮಲ್‍ಪುರ ಝಾರ್‌ನ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಕಾರಿನಲ್ಲಿದ್ದ ಪಂತ್ ಗಾಜನ್ನು ಒಡೆದುಕೊಂಡು ಹೊರ ಬಂದು ಗ್ರೇಟ್ ಎಸ್ಕೇಪ್ ಆಗಿದ್ದರು. ಕೂಡಲೇ ಪಂತ್‍ರನ್ನು ಸ್ಥಳೀಯರು ಆಸ್ಪತ್ರೆ ದಾಖಲಿಸಿದ್ದರು. ಗಂಭೀರ ಗಾಯಗೊಂಡಿದ್ದ ಪಂತ್ ಈವರೆಗೆ ಡೆಹ್ರಾಡೂನ್‍ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ. ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪಂತ್‌ಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಚಾಮುಂಡಿ ತಾಯಿ ದರ್ಶನ ಪಡೆದ ಕೆ.ಎಲ್ ರಾಹುಲ್
Second Medical Update – Rishabh Pant
More details here ????????https://t.co/VI8pWr54B9
— BCCI (@BCCI) January 4, 2023
ಅಪಘಾತದ ಬಳಿಕ ರಿಷಭ್ ಅವರ ಹಣೆಗೆ ಎರಡು ಸ್ಟಿಚ್ ಹಾಕಲಾಗಿತ್ತು. ಅವರ ಬಲ ಮೊಣಕಾಲು, ಬಲ ಮಣಿಕಟ್ಟು, ಪಾದ, ಪಾದದ ಬೆರಳು, ಬೆನ್ನಿಗೆ ಗಾಯವಾಗಿತ್ತು. ಇದೀಗ ಕಾಲಿನ ಗಾಯದ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿರುವ ಕಾರಣ ಪಂತ್‍ರನ್ನು ಮುಂಬೈಗೆ ಏರ್‌ಲಿಫ್ಟ್ ಮಾಡಿಸಿ ಚಿಕಿತ್ಸೆ ಕೊಡಿಸಲು ಬಿಸಿಸಿಐ ನಿರ್ಧರಿಸಿದೆ. ಇದನ್ನೂ ಓದಿ: ದಯವಿಟ್ಟು ಪಂತ್‍ರನ್ನು ನೋಡಲು ಆಸ್ಪತ್ರೆಗೆ ಬರಬೇಡಿ: DDCA ನಿರ್ದೇಶಕರ ಮನವಿ
https://twitter.com/rishabpantclub/status/1610568647050952704
ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪಂತ್ ಮುಂದಿನ 6 ತಿಂಗಳು ಕ್ರಿಕೆಟ್‍ನಿಂದ ದೂರ ಉಳಿಯಬೇಕಾಗಿದ್ದು, ಈ ಬಾರಿಯ ಐಪಿಎಲ್‍ನಲ್ಲೂ ಆಡುವುದು ಅನುಮಾನವಾಗಿದೆ. ಇದನ್ನೂ ಓದಿ: ವೈಡ್ ಕೊಡದ ಅಂಪೈರ್‌ಗೆ ನಿಂದಿಸಿದ ದೀಪಕ್ ಹೂಡಾ
Live Tv
[brid partner=56869869 player=32851 video=960834 autoplay=true]