ಅಡಿಲೇಡ್: ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್ ಆಸೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆಯುವ ಮೂಲಕ ವಿಶ್ವದಾಖಲೆ ಸರಿಗಟ್ಟಿದ್ದಾರೆ.
21 ವರ್ಷದ ರಿಷಬ್ ಪಂತ್ ಅಸೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 11 ಕ್ಯಾಚ್ ಪಡೆದಿದ್ದಾರೆ. ಈ ಮೂಲಕ 2013 ರಲ್ಲಿ ದಕ್ಷಿಣ ಆಫ್ರಿಕಾ ಕೀಪರ್ ಎಬಿ ಡಿ ವಿಲಿಯರ್ಸ್ ಪಾಕಿಸ್ತಾನದ ವಿರುದ್ಧ ಹಾಗೂ 2013ರಲ್ಲಿ ಇಂಗ್ಲೆಂಡ್ ಆಟಗಾರ ಜಾಕ್ ರಸೆಲ್ ಆಫ್ರಿಕಾ ವಿರುದ್ಧ 11 ಕ್ಯಾಚ್ ಪಡೆದ ವಿಶ್ವದಾಖಲೆಯನ್ನು ಪಂತ್ ಸರಿಗಟ್ಟಿದ್ದಾರೆ.
ಭಾರತದ ಪರ ಪಂದ್ಯವೊಂದರಲ್ಲಿ ವೃದ್ಧಿಮಾನ್ ಸಹಾ 10 ಕ್ಯಾಚ್ ಪಡೆದಿದ್ದರೆ, ಧೋನಿ 9 ಕ್ಯಾಚ್ ಪಡೆದಿದ್ದಾರೆ. ವೃದ್ಧಿಮಾನ್ ಸಹಾ 2018 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರೆ, ಧೋನಿ 2014ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೆಲ್ಬರ್ನ್ ಟೆಸ್ಟ್ ನಲ್ಲಿ 9 ಕ್ಯಾಚ್ ಪಡೆದಿದ್ದರು.
ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ನಲ್ಲಿ 6 ಕ್ಯಾಚ್ ಪಡೆಯುವ ಮೂಲಕ ರಿಷಬ್ ಪಂತ್ ಭಾರತದ ಪರ ಧೋನಿ ನಿರ್ಮಿಸಿದ್ದ ದಾಖಲೆಯನ್ನು ಸರಿಗಟ್ಟಿದ್ದರು. ಈ ಹಿಂದೆ 2009 ರಲ್ಲಿ ಧೋನಿ ಇನ್ನಿಂಗ್ಸ್ ಒಂದರಲ್ಲಿ 6 ಕ್ಯಾಚ್ ಪಡೆದಿದ್ದರು. ಪಂತ್ ವೃತ್ತಿ ಜೀವನದ 6ನೇ ಟೆಸ್ಟ್ ಪಂದ್ಯವನ್ನ ಆಡುತ್ತಿದ್ದು, ಇದುವರೆಗೂ 43.25 ಸರಾಸರಿಯಲ್ಲಿ 346 ರನ್ ಸಿಡಿಸಿದ್ದಾರೆ.
ಕ್ಯಾಚ್ ಮೂಲಕ 35 ವಿಕೆಟ್: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿಶೇಷ ದಾಖಲೆ ನಿರ್ಮಾಣವಾಗಿದ್ದು, ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಪಂದ್ಯವೊಂದರಲ್ಲಿ 35 ಆಟಗಾರರು ಕ್ಯಾಚ್ ಮೂಲಕವೇ ಔಟ್ ಆಗಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ ನಲ್ಲಿ ಎಲ್ಲ 10 ಆಟಗಾರರು ಕ್ಯಾಚ್ ಮೂಲಕವೇ ಔಟ್ ಆಗಿದ್ದಾರೆ. ಇದನ್ನು ಓದಿ : ಆಸ್ಟ್ರೇಲಿಯಾ ನೆಲದಲ್ಲಿ ವಿಶಿಷ್ಟ ಸಾಧನೆ ನಿರ್ಮಿಸಿದ ವಿರಾಟ್ ಕೊಹ್ಲಿ!
ಈ ಹಿಂದೆ 2018ರ ಕೇಪ್ ಟೌನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ 34 ವಿಕೆಟ್ ಕ್ಯಾಚ್ ಮೂಲಕ ಪಡೆಯಲಾಗಿತ್ತು. 1992ರ ಪಾರ್ಥ್ ನಲ್ಲಿ ನಡೆದ ಆಸ್ಟ್ರೇಲಿಯಾ, ಟೀಂ ಇಂಡಿಯಾ ವಿರುದ್ಧ ಪಂದ್ಯದಲ್ಲಿ 33 ಮಂದಿ ಕ್ಯಾಚ್ ನೀಡಿ ಔಟಾಗಿದ್ದರು.
The winning moment! ☝ #AUSvIND pic.twitter.com/oRjvvl6ERU
— ICC (@ICC) December 10, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv