– ಕನ್ನಡಿಗ ಪ್ರಸಿದ್ಧ್ ಕೃಷ್ಣ, ಶಮಿ ಐಪಿಎಲ್‌ನಿಂದ ಔಟ್
ಮುಂಬೈ: ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕ್ರಿಕೆಟಿಗ ರಿಷಭ್ ಪಂತ್‌ಗೆ (Rishabh Pant) ಫಿಟ್‍ನೆಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಿದ ಬೆನ್ನಲ್ಲೇ ಐಪಿಎಲ್‌ನಲ್ಲಿ ಪಾಲ್ಗೊಳ್ಳುವುದಕ್ಕೆ ಬಿಸಿಸಿಐ (BCCI) ಗ್ರೀನ್ ಸಿಗ್ನಲ್ ನೀಡಿದೆ. ರಿಷಭ್ ಸಂಪೂರ್ಣ ಫಿಟ್ ಆಗಿದ್ದು, ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಬಹುದಾಗಿದೆ ಎಂದು ಅನುಮತಿ ನೀಡಿದೆ. ಆದ್ರೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಮತ್ತು ವೇಗಿ ಮೊಹಮ್ಮದ್ ಶಮಿ ಅವರು ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದೆ.
Advertisement
2022ರ ಡಿಸೆಂಬರ್ 30ರಂದು ತಡರಾತ್ರಿ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಅಂದಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಪಂತ್ ಕಳೆದ 2-3 ತಿಂಗಳ ಹಿಂದೆ ಮತ್ತೆ ಬ್ಯಾಟ್ ಹಿಡಿಯಲು ಪ್ರಾರಂಭಿಸಿದ್ದರು. ನಂತರ ಅವರು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಪುನರ್ವಸತಿ ಕೇಂದ್ರದಲ್ಲಿ ಅಭ್ಯಾಸ ನಡೆಸುತ್ತಿದ್ದರು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಎನ್‌ಸಿಎ ಪಂತ್ ಅವರಿಗೆ ಫಿಟ್‌ನೆಸ್ ಕ್ಲೆಯರೆನ್ಸ್ ನೀಡಿದ್ದು, ಈ ಬೆನ್ನಲ್ಲೇ ಬಿಸಿಸಿಐ ಸಹ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಪರವಾಗಿ ಪ್ರತಿನಿಧಿಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ.
Advertisement
Advertisement
ರಿಷಬ್‌ಗೆ ಏನಾಗಿತ್ತು?
2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ (Car Accident) ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.
Advertisement
ಬಿಸಿಸಿಐ ಪ್ರಕಟಣೆಯಲ್ಲಿ ಏನಿದೆ?
ರಿಷಭ್ ಪಂತ್ ಮುಂದಿನ 2024ರ ಟಾಟಾ ಐಪಿಎಲ್ 17ನೇ ಆವೃತ್ತಿಯಲ್ಲಿ ವಿಕೆಟ್ ಕೀಪರ್, ಬ್ಯಾಟರ್ ಆಗಿ ಆಡಲು ಫಿಟ್ ಆಗಿದಾರೆ. ಇದನ್ನೂ ಓದಿ: ಮಾ.22 ರಿಂದ IPL ಶುರು; ಉದ್ಘಾಟನಾ ಪಂದ್ಯದಲ್ಲೇ ಚೆನ್ನೈ-ಆರ್‌ಸಿಬಿ ನಡುವೆ ಹೈವೋಲ್ಟೇಜ್ ಕದನ!
ಪ್ರಸಿದ್ಧ್ ಕೃಷ್ಣ:
ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಕಳೆದ ಫೆಬ್ರವರಿ 23 ರಂದು ಪ್ರಾಕ್ಸಿಮಲ್ ಕ್ವಾಡ್ರೈಸ್ಪ್ ಸ್ನಾಯುರಜ್ಜು (ಎಡಗಾಲಿನ ಮಂಡಿಮೂಳೆ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಅವರನ್ನು ಬಿಸಿಸಿಐ ವೈದ್ಯಕೀಯ ತಂಡವು ಮೇಲ್ವಿಚಾರಣೆ ನಡೆಸುತ್ತಿದೆ. ಶೀಘ್ರದಲ್ಲೇ ಅವರು ಎನ್‌ಸಿಎನಲ್ಲಿ ಅಭ್ಯಾಸ ಆರಂಭಿಸಲಿದ್ದಾರೆ. ಆದ್ರೆ ಸದ್ಯಕ್ಕೆ 2024 ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸಲು ಆಗುವುದಿಲ್ಲ.
ಮೊಹಮ್ಮದ್ ಶಮಿ:
2023ರ ಏಕದಿನ ವಿಶ್ವಕಪ್ ಟೂರ್ನಿ ವೇಳೆ ಎಡಪಾದದ ಗಾಯಕ್ಕೆ ತುತ್ತಾಗಿದ್ದ ಶಮಿ (Mohammed Shami) ಕಳೆದ ಫೆಬ್ರವರಿ 26ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಬಿಸಿಸಿಐ ವೈದ್ಯಕೀಯ ತಂಡ ಅವರನ್ನ ಮೇಲ್ವಿಚಾರಣೆ ನಡೆಸುತ್ತಿದ್ದು, ಅವರೂ 2024ರ ಐಪಿಎಲ್ ಆವೃತ್ತಿಯಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಐಪಿಎಲ್‍ನಿಂದ ಶಮಿ ಔಟ್ – ಟಿ20ಗೆ ಕಣಕ್ಕಿಳಿಸಲು ಬಿಸಿಸಿಐ ಚಿಂತನೆ
ಟೈಟಾನ್ಸ್‌ಗೆ ಆಘಾತ:
ಗುಜರಾತ್ ಟೈಟಾನ್ಸ್ (Gujarat Titans) ತಂಡದ ಬೌಲಿಂಗ್ ಸಾರಥಿ ಮೊಹಮ್ಮದ್ ಶಮಿ (Mohammed Shami) 2024ರ ಐಪಿಎಲ್ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಈಗಾಗಲೇ ಹಾರ್ದಿಕ್ ಪಾಂಡ್ಯ ಅವರನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಗುಜರಾತ್ ತಂಡಕ್ಕೆ ಮೊಹಮ್ಮದ್ ಶಮಿ ಅವರ ಗೈರು ಮತ್ತಷ್ಟು ಆಘಾತ ನೀಡಿದೆ.