ಸ್ವಿಮ್ಮಿಂಗ್ ಪೂಲ್‌ನಲ್ಲಿ ವಾಕ್ ಮಾಡಿದ ಪಂತ್ – ಬೇಗ ಗುಣಮುಖರಾಗಿ ಅಂದ್ರು ಫ್ಯಾನ್ಸ್

Public TV
1 Min Read
Rishabh Pant

– ರಿಷಭ್ ಪಂತ್ ಆರೋಗ್ಯದಲ್ಲಿ ಚೇತರಿಕೆ

ಮುಂಬೈ: ಟೀಂ ಇಂಡಿಯಾ‌ (Team India) ಸ್ಟಾರ್ ಕ್ರಿಕೆಟಿಗ ರಿಷಭ್ ಪಂತ್ (Rishabh Pant) ಅವರ ಆರೋಗ್ಯದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಗಾಯದ ಸಮಸ್ಯೆಯಿಂದ ಹಂತ-ಹಂತವಾಗಿ ಚೇತರಿಸಿಕೊಳ್ಳುತ್ತಿರುವ ಪಂತ್ ತಮ್ಮ ಆರೋಗ್ಯ ಚೇತರಿಕೆ ಬಗ್ಗೆ ಅಪ್ಡೇಟ್ಸ್ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Rishabh Pant (@rishabpant)

ರಿಷಭ್ ಪಂತ್‌ಗೆ ಸ್ವಿಮ್ಮಿಂಗ್ ಪೂಲ್ ಸೆಷನ್ ಆರಂಭಿಸಲಾಗಿದೆ. ಪಂತ್ ಸ್ವಿಮ್ಮಿಂಗ್ ಪೂಲ್‌ನಲ್ಲಿ (Swimming Pool) ಸ್ಟಿಕ್ ಹಿಡಿದು ವಾಕಿಂಗ್ ಮಾಡುರುವ ವೀಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ `ಸಣ್ಣ ವಿಷಯಗಳು ಹಾಗೂ ದೊಡ್ಡ ವಿಷಯಗಳ ನಡುವೆ ಎಲ್ಲದಕ್ಕೂ ಕೃತಜ್ಞನಾಗಿರುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: RCB, MI, Delhi ಅಭಿಮಾನಿಗಳಿಗೆ ನಿರಾಸೆ – 2023ರ ಐಪಿಎಲ್‌ನಿಂದ ಈ ಸ್ಟಾರ್ ಆಟಗಾರರು ಔಟ್

Rishabh Pant 3

ಪಂತ್‌ಗೆ ಏನಾಗಿತ್ತು?
2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ದೆಹಲಿಯಿಂದ ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದನ್ನೂ ಓದಿ: ವಿರಾಟ್ ಅಣ್ಣನ ಸಲಹೆ ಸಹಾಯವಾಯ್ತು – RCB ಗೆಲುವಿನ ನಂತ್ರ ಮಂದಾನ ಮುಖದಲ್ಲಿ ಮಂದಹಾಸ

Rishabh Pant 1

ರಿಷಭ್ ಪಂತ್ ಗಾಯದ ಸಮಸ್ಯೆಯಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದ್ದರಿಂದ ಈ ಬಾರಿ ಐಪಿಎಲ್‌ನಲ್ಲಿ (IPL 2023) ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅವರು ಗೈರಾಗಲಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *