ಡೆಹ್ರಾಡೂನ್: ಭಾರತದ ವಿಕೆಟ್ ಕೀಪರ್ ಹಾಗೂ ಎಡಗೈ ಬ್ಯಾಟ್ಸ್‌ಮ್ಯಾನ್ ರಿಷಭ್ ಪಂತ್ ಉತ್ತರಾಖಂಡದ ಜನರಲ್ಲಿ ಕ್ರೀಡೆ ಮತ್ತು ಸಾಮಾನ್ಯ ಆರೋಗ್ಯವನ್ನು ಉತ್ತೇಜಿಸಲು ತಮ್ಮಿಂದಾಗುವ ಪ್ರೋತ್ಸಾಹವನ್ನು ನೀಡುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.
ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಪಂತ್ ಅವರನ್ನು ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದ್ದಾರೆ. ಇದನ್ನೂ ಓದಿ: 8ನೇ ಆವೃತ್ತಿ ಪ್ರೊ ಕಬಡ್ಡಿಗೆ ಬೆಂಗಳೂರು ಸಜ್ಜು
ಉತ್ತರಾಖಂಡದ ಜನರು, ಜೀವನದ ವಿವಿಧ ಕ್ಷೇತ್ರಗಳಲ್ಲಿ ದೇಶವನ್ನು ಹೆಮ್ಮೆ ಪಡಿಸುವಂತಹ ಸಾಮರ್ಥ್ಯವನ್ನು ಹೊಂದಿದ್ದಾರೆ. ಕ್ರೀಡೆ ಮತ್ತು ಸಾಮಾನ್ಯ ಆರೋಗ್ಯವನ್ನು ಪ್ರೋತ್ಸಾಹಿಸಲು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದ ಪುಷ್ಕರ್ ಧಾಮಿ ಸರ್‌ಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ
Thank you @pushkardhami sir for giving me the opportunity to be the Brand Ambassador of promoting Sports and General Health among the people of Uttarakhand. I’ll do my best to spread this message and feeling happy that you are taking these steps towards a fitter India. https://t.co/xv17rs5bV0
— Rishabh Pant (@RishabhPant17) December 19, 2021
ಪ್ರಸ್ತುತ ರಿಷಭ್ ಪಂತ್ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ನಲ್ಲಿದ್ದಾರೆ. ಡಿಸೆಂಬರ್ 26ರಂದು ಆರಂಭವಾಗಲಿರುವ ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದಾರೆ.