ನವದೆಹಲಿ: ಭಾರತದ ಮಾಜಿ ನಾಯಕ ಎಂ.ಎಸ್ ಧೋನಿಯನ್ನು ಯುವ ಆಟಗಾರ ರಿಷಬ್ ಪಂತ್ ಟೆಸ್ಟ್ ವಿಕೆಟ್ ಕೀಪಿಂಗ್‍ನಲ್ಲಿ ಹಿಂದಿಕ್ಕಿದ್ದಾರೆ.
ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ರಿಷಬ್ ಪಂತ್ ಆಡುತ್ತಿದ್ದಾರೆ. ಭಾರತದ ವಿಕೆಟ್ ಕೀಪರ್ ಗಳಲ್ಲಿ ಟೆಸ್ಟ್ ಪಂದ್ಯದಲ್ಲಿ ಅತಿ ಬೇಗ 50 ಬ್ಯಾಟ್ಸ್ ಮನ್‍ಗಳನ್ನು ಔಟ್ ಮಾಡಿದ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈ ಮೂಲಕ ಎಂ.ಎಸ್ ಧೋನಿ ಅವರ ದಾಖಲೆಯನ್ನು ಮುರಿದು ಹಾಕಿದ್ದಾರೆ.
Advertisement
Advertisement
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ವಿಂಡೀಸ್ ಆಟಗಾರ ಕ್ರೈಗ್ ಬ್ರಾಥ್‍ವೈಟ್ ಅವರನ್ನು ಕ್ಯಾಚ್ ಹಿಡಿದು ಔಟ್ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಹಿಂದೆ ಎಂ.ಎಸ್ ಧೋನಿ 15 ಟೆಸ್ಟ್ ಪಂದ್ಯಗಳಲ್ಲಿ 50 ಬ್ಯಾಟ್ಸ್ ಮನ್‍ಗಳನ್ನು ಔಟ್ ಮಾಡಿದ್ದರು. ಆದರೆ ಆಡಿದ 11 ಪಂದ್ಯಗಳಲ್ಲೇ 50 ಬ್ಯಾಟ್ಸ್ ಮನ್ ಗಳನ್ನು ಬಲಿ ಪಡೆದಿರುವ ಪಂತ್, ಧೋನಿ ಅವರ ಸಾಧನೆಯನ್ನು ಹಿಂದಿಕ್ಕಿದ್ದಾರೆ.
Advertisement
ಈ ಸಾಧನೆ ಮಾಡಿದ ವಿಶ್ವದ ಟಾಪ್ ವಿಕೆಟ್ ಕೀಪರ್ ಗಳಲ್ಲಿ ಪಂತ್ ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಆಡಮ್ ಗಿಲ್‍ಕ್ರಿಸ್ಟ್ ಅವರ ಜೊತೆ ಎರಡನೇ ಸ್ಥಾನದಲ್ಲಿದ್ದಾರೆ. ಇದರ ಜೊತೆಗೆ 10 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಕ್ಷಿಣ ಆಫ್ರಿಕಾದ ಮಾಜಿ ಕೀಪರ್ ಮಾರ್ಕ್ ಬೌಚರ್, ಇಂಗ್ಲೆಂಡ್‍ನ ಜೋಸ್ ಬಟ್ಲರ್ ಮತ್ತು ಆಸ್ಟ್ರೇಲಿಯಾದ ಟಿಮ್ ಪೈನ್ ಮೊದಲ ಸ್ಥಾನದಲ್ಲಿ ಇದ್ದಾರೆ.
Advertisement
ದೆಹಲಿಯ ರಿಷಬ್ ಪಂತ್ ಅವರನ್ನು ಎಂ.ಎಸ್ ಧೋನಿಯ ನಂತರ ಭಾರತದ ಭವಿಷ್ಯದ ವಿಕೆಟ್ ಕೀಪರ್ ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಅವರನ್ನು ಮುಂದಿನ ಟೂರ್ನಿಗೆ ಸಿದ್ಧ ಮಾಡಲು ಈಗ ಅವರಿಗೆ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿ ಹೆಚ್ಚು ಅವಕಾಶ ನೀಡುತ್ತಿದ್ದೇವೆ ಎಂದು ಭಾರತದ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದರು.
ಎಡಗೈ ಬ್ಯಾಟ್ಸ್ ಮನ್ ಆಗಿರುವ ಈ ಯುವ ಪ್ರತಿಭೆಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಬೆಂಬಲ ನೀಡಿದ್ದು, ರಿಷಬ್ ಪಂತ್ ಅವರಲ್ಲಿ ನಾವು ಭವಿಷ್ಯವನ್ನು ನೋಡುತ್ತಿದ್ದೇವೆ. ಖಂಡಿತವಾಗಿಯೂ ಅವರು ಒಬ್ಬ ಒಳ್ಳೆಯ ಪ್ರತಿಭೆ ಇರುವಂತ ಆಟಗಾರ ಎಂದು ಹೇಳಿದ್ದರು.