ಮುಂಬೈ: ಭೀಕರ ಕಾರು ಅಪಘಾತದಿಂದ (Car Accident) ಗಂಭೀರ ಗಾಯಗೊಂಡಿದ್ದ ಟೀಂ ಇಂಡಿಯಾ (Team India) ಕ್ರಿಕೆಟಿಗ ರಿಷಬ್ ಪಂತ್‌ಗೆ (Rishabh Pant) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
I may not have been able to thank everyone individually, but I must acknowledge these two heroes who helped me during my accident and ensured I got to the hospital safely. Rajat Kumar & Nishu Kumar, Thank you. I'll be forever grateful and indebted ????♥️ pic.twitter.com/iUcg2tazIS
— Rishabh Pant (@RishabhPant17) January 16, 2023
Advertisement
ಮಂಗಳವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ ಅಪಘಾತದ ನಂತರ ತಮಗೆ ಸಹಾಯ ಮಾಡಿದ ಇಬ್ಬರು ಯುವಕರನ್ನ ಸ್ಮರಿಸಿದ್ದಾರೆ. ರಜತ್ ಕುಮಾರ್ ಮತ್ತು ನಿಶು ಕುಮಾರ್ ಚಿತ್ರವನ್ನ ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಪಂತ್ ಭಾವುಕ ಸಂದೇಶ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ದೇವರೆಂದು ಕಾಲಿಗೆ ಬಿದ್ದ ಅಭಿಮಾನಿಯ ಆಸೆ ಪೂರೈಸಿದ ಕೊಹ್ಲಿ – ನೆಟ್ಟಿಗರಿಂದ ಭಾರೀ ಮೆಚ್ಚುಗೆ
Advertisement
I am humbled and grateful for all the support and good wishes. I am glad to let you know that my surgery was a success. The road to recovery has begun and I am ready for the challenges ahead.
Thank you to the @BCCI , @JayShah & government authorities for their incredible support.
— Rishabh Pant (@RishabhPant17) January 16, 2023
Advertisement
`ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಎಲ್ಲರಿಗೂ ತಿಳಿಸಲು ಬಯಸುತ್ತೇನೆ. ನಾನೀಗ ಚೇತರಿಕೆಯ ಹಾದಿಯಲ್ಲಿದ್ದೇನೆ. ನಿಮ್ಮೆಲ್ಲರ ಹಾರೈಕೆಗಾಗಿ ನಾನು ಕೃತಜ್ಞನಾಗಿದ್ದೇನೆ. ನನ್ನ ಉತ್ಸಾಹ ಹೆಚ್ಚಿದೆ. ನಾನು ಪ್ರತಿದಿನ ಚೇತರಿಸಿಕೊಳ್ಳುತ್ತಿದ್ದೇನೆ. ಮುಂದಿನ ಸವಾಲುಗಳನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ಈ ಕಷ್ಟದ ಸಮಯದಲ್ಲಿ ಸಿಕ್ಕ ನಿಮ್ಮ ಪ್ರೀತಿಯ ಮಾತುಗಳು, ಬೆಂಬಲಕ್ಕಾಗಿ ನಾನು ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಹ ಆಟಗಾರನ ಗೆಳತಿಯೊಂದಿಗೆ ಪಾಕ್ ನಾಯಕ ಚಾಟಿಂಗ್ – ಹನಿಟ್ರ್ಯಾಪ್‍ಗೆ ಸಿಲುಕಿದ್ರಾ ಬಾಬರ್ ಅಜಮ್?
Advertisement
From the bottom of my heart, I also would like to thank all my fans, teammates, doctors and the physios for your kind words and encouragement. Looking forward to see you all on the field. #grateful #blessed
— Rishabh Pant (@RishabhPant17) January 16, 2023
`ನಾನು ಎಲ್ಲರಿಗೂ ವೈಯಕ್ತಿಕವಾಗಿ ಧನ್ಯವಾದ ಹೇಳಲು ಸಾಧ್ಯವಾಗದೇ ಇರಬಹುದು. ಆದರೆ ನಾನು ಈ ಇಬ್ಬರು ವೀರರನ್ನು ಸ್ಮರಿಸಬೇಕು. ನನ್ನನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದವರು ಇವರು. ಇವರಿಗೆ ನಾನು ಶಾಶ್ವತವಾಗಿ ಕೃತಜ್ಞನಾಗಿರುತ್ತೇನೆ. ಅಲ್ಲದೇ ನನ್ನ ಅಭಿಮಾನಿಗಳು, ನನ್ನ ತಂಡ ಸಹಪಾಠಿಗಳು ಚಿಕಿತ್ಸೆ ನೀಡಿದ ವೈದ್ಯರು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಿಮ್ಮೆಲ್ಲರನ್ನೂ ನಾನು ಮತ್ತೆ ಮೈದಾನದಲ್ಲಿ ನೋಡಲು ಎದುರುನೋಡುತ್ತಿದ್ದೇನೆ ಎಂದು ಭಾವುಕ ನುಡಿಗಳನ್ನ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ರಿಷಬ್‌ಗೆ ಏನಾಗಿತ್ತು?
2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k