ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ಸದ್ಯದಲ್ಲೇ ಬಿಸಿಸಿಐ ದಿನಾಂಕ ನಿಗದಿ ಪಡಿಸಲಿದೆ. ಇದೇ ಜುಲೈ ತಿಂಗಳಾಂತ್ಯದ ವೇಳೆಗೆ ಬಿಸಿಸಿಐ (BCCI) ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ನಡುವೆ ಫ್ರಾಂಚೈಸಿಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ.
Advertisement
3 ವರ್ಷಗಳಿಗೊಮ್ಮೆ ನಡೆಯುವ ಮೆಗಾ ಹರಾಜಿನಲ್ಲಿ ಯಾವ ಯಾವ ದಿಗ್ಗಜ ಆಟಗಾರರು ಯಾವ ತಂಡವನ್ನು ಸೇರಲಿದ್ದಾರೆ ಅನ್ನೋ ಬಗ್ಗೆ ಕ್ರಿಕೆಟ್ ಪ್ರಿಯರ ಚಿತ್ತ ಹರಿದಿದೆ. ಸಿಎಸ್‌ಕೆ ತಂಡದ ಲೆಜೆಂಡ್ ಎಂ.ಎಸ್ ಧೋನಿ (MS Dhoni) ಅವರು ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಗಳಿವೆ ಎಂಬ ಸುದ್ದಿಗಳ ನಡುವೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals0 ತಂಡದ ನಾಯಕ ರಿಷಭ್ ಪಂತ್, ಮುಂದಿನ ಆವೃತ್ತಿಗೆ ಸಿಎಸ್‌ಕೆ (CSK) ತಂಡ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!
Advertisement
Advertisement
2016ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರತಿನಿಧಿಸುತ್ತಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮುಂದಿನ ವರ್ಷದ ಐಪಿಎಲ್‌ಗೆ ನಡೆಯಲಿರುವ ಮೆಗಾ ಹರಾಜಿಗೂ ಮುನ್ನವೇ ಡೆಲ್ಲಿ ಫ್ರಾಂಚೈಸಿ ತೊರೆದು 5 ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಇದನ್ನೂ ಓದಿ: Women’s Asia Cup 2024: ಸಿಂಹಿಣಿಯರ ಅಬ್ಬರಕ್ಕೆ ಪಾಕ್ ಧೂಳಿಪಟ – ಭಾರತಕ್ಕೆ ಗೆಲುವಿನ ಶುಭಾರಂಭ!
Advertisement
2024ರ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 14 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಯಿತು. ಟ್ರೋಫಿ ತಂದುಕೊಡುವಲ್ಲಿ ವಿಫಲರಾದ ಡೆಲ್ಲಿ ತಂಡದ ಮುಖ್ಯಕೋಚ್ ಆಗಿದ್ದ ರಿಕಿ ಪಾಂಟಿಂಗ್‌ಗೆ ಫ್ರಾಂಚೈಸಿ ಈಗಾಗಲೇ ಕೊಕ್ ನೀಡಿದೆ. ರಿಷಭ್ ಪಂತ್ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಮುಂದಿನ ಕೋಚ್ ಎನ್ನಲಾಗುತ್ತಿರುವ ಗಂಗೂಲಿ ಅವರು ರಿಷಭ್ ಪರವಾಗಿದ್ದಾರೆ ಎನ್ನಲಾದರೂ ಫ್ರಾಂಚೈಸಿ ತೀರ್ಮಾನ ಅಂತಿಮವಾಗಲಿದೆ. ಹೀಗಾಗಿ ಪಂತ್ ಮೆಗಾ ಹರಾಜಿಗೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿವೆ.
ಕನ್ನಡಿಗನಿಗೆ ಮಣೆಹಾಕಲಿದೆಯೇ ಆರ್‌ಸಿಬಿ?
2022ರಲ್ಲಿ ಆರಂಭವಾದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ನಾಯಕನಾಗಿರುವ ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. 2024ರ ಐಪಿಎಲ್ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಹೀನಾಯವಾಗಿ ಸೋತಿತ್ತು. ಈ ವೇಳೆ ಲಕ್ನೋ ಫ್ರಾಂಚೈಸಿ ಮಾಲೀಕರಾದ ಸಂಜೀವ್ ಗೋಯೆಂಕಾ ರಾಹುಲ್ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವೀಡಿಯೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯಿಂದ ರಾಹುಲ್, ಲಕ್ನೋ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದಾರೆ. ಮುಂಬರುವ ಮೆಗಾ ಹರಾಜಿಗೂ ಮುನ್ನ ಅವರು ಆರ್‌ಸಿಬಿ (RCB) ಪಾಲಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್ ಪಟ್ಟು!
ಐಪಿಎಲ್ ವೃತ್ತಿ ಆರಂಭಿಸಿದ್ದು ಆರ್‌ಸಿಬಿಯಿಂದಲೇ:
2013ರಿಂದ ಐಪಿಎಲ್ ವೃತ್ತಿ ಬದುಕು ಆರಂಭಿಸಿದ ಕೆ.ಎಲ್ ರಾಹುಲ್ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013 ರಿಂದ 2016ರ ಆವೃತ್ತಿಗಳಲ್ಲಿ ರಾಹುಲ್ ಆರ್‌ಸಿಬಿ ತಂಡದಲ್ಲಿಯೇ ಇದ್ದರು. ಆ ನಂತರ 2014 ಮತ್ತು 2015ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪಾಲಾದರು. 2018 ರಿಂದ 2021ರ ವರೆಗೆ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಕೆ.ಎಲ್ ರಾಹುಲ್ 2022ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೇರಿಕೊಂಡರು. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!