AdvertisementCinemaKarnatakaLatestLeading NewsMain PostSandalwood

‘ಧೂಮಂ’ ಸೆಟ್ ಗೆ ಭೇಟಿ ನೀಡಿದ ರಿಷಬ್ ಶೆಟ್ಟಿ ಹಾಗೂ ವಿಜಯ್ ಕಿರಗಂದೂರು

ಹೊಂಬಾಳೆ ಫಿಲಂಸ್​ನಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸುತ್ತಿರುವ ‘ಧೂಮಂ’ ಚಿತ್ರದ ಚಿತ್ರೀಕರಣ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿಜಯ್ ಕುಮಾರ್​ ಕಿರಗಂದೂರು, ರಿಷಭ್​ ಶೆಟ್ಟಿ, ಸಪ್ತಮಿ ಗೌಡ ಮುಂತಾದವರು ಚಿತ್ರೀಕರಣ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಚಿತ್ರೀಕರಣದಲ್ಲಿ ಫಹಾದ್​ ಫಾಸಿಲ್​, ಅಪರ್ಣಾ ಬಾಲಮುರಳಿ ಮತ್ತಿತರರು ಭಾಗವಹಿಸಿದ್ದು ಅವರೊಂದಿಗೆ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ.

‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಫಹಾದ್​ ಫಾಸಿಲ್​ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್​ ಕುಮಾರ್​, ಜಾಯ್​ ಮ್ಯಾಥ್ಯೂ, ದೇವ್​ ಮೋಹನ್​, ಅನು ಮೋಹನ್​ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್​ ಅವರ ಛಾಯಾಗ್ರಹಣವಿದೆ. ಇದನ್ನೂ ಓದಿ: ಅಭಿಷೇಕ್ ಮದುವೆ ಸುಳ್ಳು ಸುಳ್ಳು: ಸುಮಲತಾ ಅಂಬರೀಶ್ ಸ್ಪಷ್ಟನೆ

ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಒಂದು ವಾರಗಳಿಂದ ಸತತವಾಗಿ ಚಿತ್ರೀಕರಣವಾಗುತ್ತಿದ್ದು, ಫಹಾದ್ ಫಾಸಿಲ್ ಸೇರಿದಂತೆ ಹಲವು ಕಲಾವಿದರು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ನಡೆದ ಕಾಂತಾರ ಸಿನಿಮಾದ 50 ದಿನದ ಸಂಭ್ರಮದಲ್ಲೂ ಫಾಸಿಲ್ ಭಾಗಿಯಾಗಿದ್ದರು. ಅಲ್ಲದೇ, ಸಿನಿಮಾದ ಬಗ್ಗೆ ಈ ಹಿಂದೆಯೂ ಅವರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದರು.

Live Tv

Leave a Reply

Your email address will not be published. Required fields are marked *

Back to top button