ಕನ್ನಡದ ಕಾಂತಾರ (Kantara) ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಕನ್ನಡ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಚಿತ್ರವನ್ನು ಮೆಚ್ಚಿದ್ದಾರೆ. ಆಯಾ ಭಾಷೆಯ ಬಹುತೇಕ ನಟರು ಸಿನಿಮಾ ಕುರಿತು ಮಾತನಾಡಿದ್ದಾರೆ. ಅದರಲ್ಲೂ ರಿಷಬ್ ಶೆಟ್ಟಿ (Rishabh Shetty) ನಟನೆಗೆ ಫಿದಾ ಆಗಿದ್ದಾರೆ. ಕನ್ನಡಕ್ಕೆ ಮಾತ್ರ ಸೀಮಿತರಾಗಿದ್ದ ರಿಷಬ್ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ (Pan India Star) ಆಗಿ ಬದಲಾಗಿದ್ದಾರೆ.
Advertisement
ಮತ್ತೊಂದಡೆ ನಟ ರಿಷಬ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಡಬಲ್ ಖುಷಿ ಕೊಟ್ಟಿದ್ದಾರೆ. ಒಂದು ಕಡೆ ಇವರು ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಮೂಡಿಸಿದ್ದರೆ, ಮತ್ತೊಂದು ಕಡೆ ಇವರ ನಿರ್ಮಾಣದ ‘ಶಿವಮ್ಮ’ ಚಿತ್ರಕ್ಕೆ 27ನೇ ಬೂಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ದೊರೆತಿದೆ. ಇದು ಜೈ ಶಂಕರ್ ನಿರ್ದೇಶನ ಮಾಡಿ, ರಿಷಬ್ ನಿರ್ಮಾಣ ಮಾಡಿರುವ ಸಿನಿಮಾ. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ
Advertisement
Advertisement
ಬೂಸಾನ್ ನಲ್ಲಿ ನಡೆಯುತ್ತಿರುವ 27ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಶಿವಮ್ಮ’ (Shivamma) ಚಿತ್ರ ಆಯ್ಕೆಯಾಗಿತ್ತು. ಇದೀಗ ಸ್ಪರ್ಧೆಯಲ್ಲೂ ಅದು ಗೆದ್ದಿದ್ದು, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಹಳ್ಳಿಗಾಡಿನ ಮಹಿಳೆಯೊಬ್ಬರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನೆಟ್ ವರ್ಕ್ ವಹಿವಾಟಿನಲ್ಲಿ ಹೂಡಿಕೆ ಮಾಡಿ, ಅದರಿಂದ ಪಡುವ ಸಂಕಟವನ್ನು ಕುರಿತಾದ ಸಿನಿಮಾವಿದು.
Advertisement
ಈ ಸಿನಿಮಾ ವೀಕ್ಷಿಸಿದ ತೀರ್ಪುಗಾರರು ನಿರ್ದೇಶಕ ಜೈ ಶಂಕರ್ (Jai Shankar) ಅವರ ಪ್ರಯತ್ನವನ್ನು ಶ್ಲ್ಯಾಘಿಸಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಕಥೆಯನ್ನು ಆಳವಾಗಿ ಮತ್ತು ಸೂಕ್ಷ್ಮವಾಗಿ ಕಟ್ಟಿಕೊಟ್ಟ ನಿರ್ದೇಶಕರ ಜಾಣ್ಮೆಯನ್ನು ಕೊಂಡಾಡಿದ್ದಾರೆ. ಇಂತಹ ಸಿನಿಮಾಗೆ ರಿಷಬ್ ಹಣ ಹೂಡುವ ಮೂಲಕ ಹೊಸ ಹುಡುಗನ ಚಿತ್ರಕ್ಕೆ ಉತ್ತೇಜನ ನೀಡಿದ್ದಾರೆ.