ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಒಂದಿಲ್ಲೊಂದು ಕಾರಣದಿಂದಾಗಿ ಪ್ರತಿ ವರ್ಷವೂ ವಿವಾದದಿಂದಲೇ ಶುರುವಾಗುತ್ತದೆ. ಸತತ 13 ವರ್ಷಗಳಿಂದ ಇದೇ ಆಗಿದೆ. ಈ ವರ್ಷವಾದರೂ ವಿವಾದಮುಕ್ತ ಚಿತ್ರೋತ್ಸವ ನಡೆಯಲಿ ಎನ್ನುವುದು ಚಿತ್ರೋದ್ಯಮದ ಆಸೆಯಾಗಿತ್ತು. ಕೊನೆಗೂ ಆಸೆ ಈಡೇರಲಿಲ್ಲ. ತಮ್ಮ ನಿರ್ಮಾಣದ ‘ಪೆದ್ರೊ’ ಚಿತ್ರಕ್ಕೆ ಚಿತ್ರೋತ್ಸವದಲ್ಲಿ ಮನ್ನಣೆ ಸಿಕ್ಕಿಲ್ಲವೆಂದ ನಿರ್ದೇಶಕ ಕಂ ನಿರ್ಮಾಪಕ ರಿಷಭ್ ಶೆಟ್ಟಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ : EXCLUSIVE: ಸ್ಯಾಂಡಲ್‌ವುಡ್‌ಗೆ ವಾಪಸ್ಸಾದ ಮೀಟೂ ಪರ ಧ್ವನಿ ಎತ್ತಿದ್ದ ನಟಿ ಸಂಗೀತಾ
“ಜಗತ್ತಿನ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ಪ್ರಶಸ್ತಿ ಪಡೆದು, ವಿಮರ್ಶಕರಿಂದ ಪ್ರಶಂಸೆ ಪಡೆದ ಪೆದ್ರೂ ಚಿತ್ರ ನಮ್ಮ ಬೆಂಗಳೂರಿನ ಚಿತ್ರೋತ್ಸವಕ್ಕೆ ಯಾಕೋ ರುಚಿಸಿಲ್ಲ. ಕೆಲವೊಮ್ಮೆ ಕಹಿಗುಳಿಗೆಯನ್ನೂ ನುಂಗಬೇಕು ಆರೋಗ್ಯದ ದೃಷ್ಟಿಯಿಂದ. ನಮ್ಮ ಸಿನಿಮಾ ಚಿತ್ರೋತ್ಸವದಿಂದ ವಂಚಿತವಾಯಿತು ಎಂಬುದು ಎಷ್ಟು ಸತ್ಯವೋ ನಮ್ಮದೇ ಊರಿನ ಜನ ತಮ್ಮದೇ ಸಿನಿಮಾವನ್ನು ವೀಕ್ಷಿಸಲು ವಂಚಿತರಾದರು ಎಂಬುದು ಅಷ್ಟೇ ಸತ್ಯ. ನಮ್ಮಲ್ಲಿಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ ತಡೆಗಾಲು ಒಡ್ಡುವ ಪ್ರಯತ್ನ ಮಾಡಿದ್ದಾರೆ” ಎಂದು ಸುದೀರ್ಘವಾದ ಪತ್ರ ಬರೆದು, ಆರೋಪಿಸಿದ್ದಾರೆ ರಿಷಭ್. ಇದನ್ನೂ ಓದಿ : ಕಾಲಿಂದ ಕುಡಿಕೆಯೊದ್ದ ರಾಣಾ: ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ವಿರುದ್ಧ ದೂರು ದಾಖಲು
ರಿಷಭ್ ಅವರ ಆರೋಪಕ್ಕೆ ಮಂಸೋರೆ, ಅಭಯ್ ಸಿಂಹ ಸೇರಿದಂತೆ ಕೆಲ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರು ಧ್ವನಿ ಗೂಡಿಸಿದ್ದಾರೆ. ಒಳ್ಳೊಳ್ಳೆ ಸಿನಿಮಾಗಳಿಗೆ ಮಾನ್ಯತೆ ಸಿಗಲಿ ಎಂದು ಪ್ರತಿಕ್ರಿಯಿಸಿದ್ದಾರೆ.