ವಾಷಿಂಗ್ಟನ್ ನಗರದಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ

Public TV
1 Min Read
Rishab Shetty 3

ಕಾಂತಾರ ಸಿನಿಮಾ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ (Pragati Shetty) ಸಮೇತ ಅಮೆರಿಕಾದ ವಾಷಿಂಗ್ಟನ್ (Washington) ನ ಸಿಯಾಟಲ್‌ ಗೆ ಭೇಟಿ ನೀಡಿದ್ದಾರೆ‌. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ (Vishwa Shrestha Kannadiga) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Rishab Shetty 2 1

ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ (Rishab Shetty) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು. ಇದನ್ನೂ ಓದಿ: ಪಡ್ಡೆಹುಡುಗರ ಕಣ್ಣು ಕುಕ್ಕುವಂತೆ ಹಾಟ್‌ ಆಗಿ ಕಾಣಿಸಿಕೊಂಡ ‘ಕೆಜಿಎಫ್‌’ ನಟಿ

Rishab Shetty 1 2

ಅಮೆರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವನ್ನು ಯೂನಿವರ್ಸಲ್‌ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೆರಿಕಾದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.

 

ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ‌. ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದಾರೆ‌. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ 2023 ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800 ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

Share This Article