ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ (Rishabh Shetty) ಸಂಸ್ಥೆಯ ಹೆಮ್ಮೆಯ ಚಲನಚಿತ್ರ, ‘ಶಿವಮ್ಮ’ (Shivamma) ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಲಿದೆ.
Advertisement
ಭಾರತದ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಾಣುತ್ತಿದೆ. ಶಿವಮ್ಮ ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದ್ದು, ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ.
Advertisement
Advertisement
ತನ್ನ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರದಲ್ಲಿ ತೊಡಗುವ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ಹಳ್ಳಿ ಹೆಣ್ಣುಮಗಳ ಕಥೆಯಾಗಿದೆ. ಇರಾನ್‌ನಲ್ಲಿ ನಡೆದ ಫಜರ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಚಿತ್ರ ಇದಾಗಿದ್ದು, ಚಿತ್ರವು ಈಗಾಗಲೇ ಐದು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದು ಚಿತ್ರದ ಟೀಸರ್ (Teaser) ನಿನ್ನೆ ಬಿಡುಗಡೆ ಆಗಿದೆ. ಇದನ್ನೂ ಓದಿ:ನಾನು ಮದುವೆಯಾಗುವ ಹುಡುಗ ಅದಿತಿ ಪ್ರಭುದೇವ ಗಂಡನ ಥರ ಇರಬೇಕು- ಸೋನು
Advertisement
ರಿಷಬ್ ಶೆಟ್ಟಿ ಫಿಲಂಸ್ ನಿರ್ಮಾಣದಲ್ಲಿ ಮೂಡಿ ಬಂದ, ರಿಷಬ್ ಶೆಟ್ಟಿ ನಿರ್ಮಾಪಕರಾಗಿರುವ ಶಿವಮ್ಮ ಸಿನಿಮಾಗೆ ಸಾಕಷ್ಟು ಪ್ರಶಸ್ತಿಗಳು ಬಂದಿವೆ. ಈಗ ಫ್ರಾನ್ಸ್ ನ ನಾಂಟೆಸ್ ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್ಸ್ ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿದೆ. ಜೈಶಂಕರ್ ಅರ್ಯರ (Jai Shankar) ನಿರ್ದೇಶನದ ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚನ್ನೆಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.
ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ೪೬ ವರ್ಷದ ಶಿವಮ್ಮ ಎನ್ನುವ ಮಹಿಳೆ ತನ್ನ ಪಾರ್ಶ್ವವಾಯು ಪೀಡಿತ ಪತಿಯನ್ನು ಸಾಕಿಕೊಂಡು, ತನ್ನ ಮಕ್ಕಳ ಭವಿಷ್ಯಕ್ಕಾಗಿ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರವನ್ನು ಭರವಸೆಯಿಂದ ಪಾಲಿಸುವ ಹೋರಾಟದ ಕಥೆಯನ್ನು ಸಿನಿಮಾ ಮಾಡಿದ್ದಾರೆ ನಿರ್ದೇಶಕರು. ಆದಷ್ಟು ನೈಜವಾಗಿಯೇ ಇಡೀ ಸಿನಿಮಾವನ್ನು ಕಟ್ಟಿರುವುದು ಮತ್ತೊಂದು ವಿಶೇಷ.
Web Stories