‘ಮಂಗಳಾಪುರಂ’ ಸಿನಿಮಾ ಕಥೆ ಹೇಳಲು ಸಜ್ಜಾದ ರಿಷಿ

Public TV
1 Min Read
rishi 1

ಟ ರಿಷಿ (Rishi) ಸದಾ ವಿಭಿನ್ನ ಕಥೆಗಳನ್ನ ಆಯ್ಕೆ ಮಾಡಿಕೊಂಡು ಪ್ರೇಕ್ಷಕರ ಮುಂದೆ ಬರುವ ಕಲಾವಿದ. ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ರಿಷಿ ಮಂಗಳೂರು ಮೂಲದ ತಂಡದ ಜೊತೆಗೆ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ಉಮಿಲ್ ಹಾಗೂ ದೊಂಬರಾಟ ಸಿನಿಮಾ ಮಾಡಿ ಸಕ್ಸಸ್ ಕಂಡಿರೋ ರಂಜಿತ್ ರಾಜ್ ಸುವರ್ಣ ಅವರು ರಿಷಿ ನಟನೆಯ ಹೊಸ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ:ಧನುಷ್ ನಟನೆಯ ‘ಕುಬೇರ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್

rishi 1

ರಿಷಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ‘ಮಂಗಳಾಪುರಂ’ (Mangalapuram Film) ಎಂದು ಹೆಸರಿಟ್ಟಿದ್ದು ಸದ್ಯ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದೆ ಚಿತ್ರತಂಡ. ರಿಷಿ ಜೊತೆ ಕಾಶಿನಾಥ್ (Kashinath) ಪುತ್ರ ಅಭಿಮನ್ಯು ಕೂಡ ನಟಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅಭಿಮನ್ಯು (Abhimanyu) ಹಾಗೂ ರಿಷಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ. ಇದನ್ನೂ ಓದಿ: ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

rishi

‘ಮಂಗಳಾಪುರಂ’ ಸಿನಿಮಾ ಒಂದು ಊರಿನಲ್ಲಿ ನಡೆಯುವ ಮರ್ಡರ್ ಮಿಸ್ಟ್ರಿ ಕಥೆ. ನಂಬಿಕೆ, ಮೂಡನಂಬಿಕೆ, ಕೈವಾಡ ಹಾಗೂ ಪವಾಡ ವಿಚಾರದ ಮೇಲೆ ಕಥೆ ಸಾಗಲಿದೆ. ಈ ಸಿನಿಮಾಗೆ ಪ್ರಸನ್ನ ತಂತ್ರಿ ಮೂಡಬಿದ್ರೆ ಹಾಗೂ ರಾಮ್ ಪ್ರಸಾದ್ ಬಂಡವಾಳ ಹಾಕಿದ್ದಾರೆ. ಈ ಮೂಲಕ ಮೊದಲ ಬಾರಿಗೆ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

rishi ranjith raj suvarna

ಸದ್ಯ ಫಸ್ಟ್ ಲುಕ್ ರಿವೀಲ್ ಮಾಡಿರುವ ತಂಡ ಜೂನ್‌ನಲ್ಲಿ ಚಿತ್ರೀಕರಣ ಶುರು ಮಾಡಲಿದೆ. ಕಾರ್ಕಳ, ತೀರ್ಥಹಳ್ಳಿ, ಮಡಿಕೇರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಅನೂಪ್ ಸಿಳೀನ್ ಸಂಗೀತ ನಿರ್ದೇಶನ ಸಿನಿಮಾಗೆ ಇರಲಿದ್ದು, ಅಭಿಷೇಕ್ ಕಾಸರಗೋಡು ಕ್ಯಾಮೆರಾ ವರ್ಕ್ ಮಾಡಲಿದ್ದಾರೆ. ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಿರುವ ತಂಡ ಆದಷ್ಟು ಬೇಗ ಶೂಟಿಂಗ್ ಮುಗಿಸಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

Share This Article