ಲಂಡನ್: ಭಾರತ ಮೂಲದ ಮಾಜಿ ಬ್ರಿಟಿಷ್ ಹಣಕಾಸು ಸಚಿವ ರಿಷಿ ಸುನಾಕ್ 4 ನೇ ಸುತ್ತಿನ ಮತದಾನದಲ್ಲಿ 118 ಮತಗಳನ್ನು ಪಡೆಯುವ ಮೂಲಕ ಬ್ರಿಟಿಷ್ ಪ್ರಧಾನಿ ಹುದ್ದೆಗೆ ಇನ್ನೂ ಹತ್ತಿರವಾಗಿದ್ದಾರೆ. ಕನ್ಸರ್ವೇಟಿವ್ ಪಕ್ಷದ ನಾಯಕನಾಗುವ ಸ್ಪರ್ಧೆಯಲ್ಲೂ ಸುನಾಕ್ ಮುನ್ನಡೆ ಸಾಧಿಸಿದ್ದಾರೆ.
ಮಂಗಳವಾರ ನಡೆದ ಕನ್ಸರ್ವೇಟಿವ್ ಪಕ್ಷದ 4 ನೇ ಸುತ್ತಿನ ಮತದಾನದಲ್ಲಿ ಸುನಾಕ್ 118 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. ಕಳೆದ 3 ನೇ ಸುತ್ತಿನ ಮತದಾನದಲ್ಲಿ ಸುನಾಕ್ 115 ಮತಗಳನ್ನು ಪಡೆದಿದ್ದರು. ಇದೀಗ 118 ಮತಗಳನ್ನು ಪಡೆಯುವ ಮೂಲಕ ತಮ್ಮ ಸ್ಥಾನದ ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದ 92 ಮಂದಿ ಸಿವಿಲ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ
Advertisement
Advertisement
ವ್ಯಾಪಾರದ ಸಚಿವ ಪೆನ್ನಿ ಮೊರ್ಡಾಂಟ 92 ಮತ ಹಾಗೂ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ 68 ಮತಗಳನ್ನು ಪಡೆಯುವ ಮೂಲಕ 2ನೇ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಮಾಜಿ ಸಚಿವ ಬಡೆನೊಚ್ 59 ಮತಗಳನ್ನು ಪಡೆಯುವ ಮೂಲಕ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಾವಿರ ಗಡಿದಾಟಿದ ಕೊರೊನಾ – ಬೆಂಗ್ಳೂರಲ್ಲಿ 1,013 ಕೇಸ್, 1,104 ಮಂದಿ ಡಿಸ್ಚಾರ್ಜ್
Advertisement
ಬುಧವಾರ 5ನೇ ಸುತ್ತಿನ ಮತದಾನ ನಡೆಯಲಿದ್ದು, ಬ್ರಿಟಿಷ್ ಪ್ರಧಾನಿ ಸ್ಥಾನಕ್ಕೆ ಸ್ಪರ್ಧೆ ನಡೆಸಲಿರುವ ಅಂತಿಮ ಸುತ್ತಿನ ಇಬ್ಬರು ಅಬ್ಯರ್ಥಿಗಳು ಯಾರು ಎಂಬುದು ತಿಳಿದುಬರಲಿದೆ.