ದಾವಣಗೆರೆ: ಮಧ್ಯಕರ್ನಾಟಕದ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಏರಿಕೆ ಕಂಡಿದ್ದು, ಜಿಲ್ಲಾಧಿಕಾರಿಗಳಿಗೆ ಹಾಗೂ ಡಿಹೆಚ್‍ಓಗಳಿಗೆ ಆಸ್ಪತ್ರೆಗಳ ಮೇಲೆ ನಿಗಾವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಖಡಕ್ ಸೂಚನೆ ನೀಡಿದ್ದಾರೆ.
ದಾವಣಗೆರೆ (Davanagere) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಅವರು ಸಭೆ ನಡೆಸಿದ್ದಾರೆ. ಈ ವೇಳೆ ನವಜಾತ ಶಿಶುಗಳ ಮರಣ ಹಾಗೂ ಬಾಣಂತಿಯರ ಸಾವಿನ ಬಗ್ಗೆ ತೀವ್ರ ನಿಗವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Advertisement
ಕಳೆದ ಏಳು ತಿಂಗಳಲ್ಲಿ 135 ನವಜಾತು ಶಿಶುಗಳು ಹಾಗೂ 28 ತಾಯಂದಿರ ಸಾವಾಗಿದೆ. ಖಾಸಗಿ ಆಸ್ಪತ್ರೆಗಳಿಗಿಂತ, ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲೇ ಮರಣ ಪ್ರಮಾಣ ಏರಿಕೆಯಾಗಿದೆ. ಪ್ರತಿ ತಿಂಗಳು 600 ರಿಂದ 700 ಹೆರಿಗೆ ಆಗುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವಾಗುತ್ತಿದೆ. ಇನ್ನೂ ಕಡೇ ಕ್ಷಣದಲ್ಲಿ ತೀವ್ರ ತುರ್ತು ಸಂದರ್ಭಗಳಲ್ಲಿ ಬರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ.
Advertisement
Advertisement
ಬಹುತೇಕ ಬಡವರೇ ಆಗಮಿಸುವ ಜಿಲ್ಲಾಸ್ಪತ್ರೆಗಳಲ್ಲಿ ನವಜಾತು ಶಿಶುಗಳ ಸಾವಿನ ಸಂಖ್ಯೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಜೇರಿಯನ್ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಇನ್ನೂ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಗಳಲ್ಲಿ 72%ನಷ್ಟು ಸಿಜೇರಿಯನ್ ನಡೆಯುತ್ತಿದೆ.
Advertisement
ಈ ಎಲ್ಲಾ ವಿಚಾರವಾಗಿ, ಮಧ್ಯ ಕರ್ನಾಟಕದ ಹಾವೇರಿ, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಅಲ್ಲದೇ ಪ್ರಾಥಮಿಕ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾವಹಿಸುವಂತೆ ಡಿಹೆಚ್‍ಓಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.