ಮುಂಬೈ: ಬಾಲಿವುಡ್ ಸ್ಟಾರ್ ಜೋಡಿ ನಟ ರಿತೇಶ್ ದೇಶ್‍ಮುಖ್ ಹಾಗೂ ನಟಿ ಜೆನಿಲಿಯಾ ಡಿಸೋಜಾ ಮಹಾರಾಷ್ಟ್ರ ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ತಮ್ಮ ಟ್ವಿಟ್ಟರಿನಲ್ಲಿ ರಿತೇಶ್ ಹಾಗೂ ಜೆನಿಲಿಯಾ ಚೆಕ್ ನೀಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ಮಹಾರಾಷ್ಟ್ರ ಪ್ರವಾಹಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಿದ ಜೆನಿಲಿಯಾ ಹಾಗೂ ರಿತೇಶ್‍ಗೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.
Thank you Riteish and Genelia Deshmukh for the contribution of ₹25,00,000/- (₹25 lakh) towards #CMReliefFund for #MaharashtraFloods !
@Riteishd @geneliad pic.twitter.com/Y6iDng2epD
— Devendra Fadnavis (@Dev_Fadnavis) August 12, 2019
ಹಲವು ಕಲಾವಿದರು ಮಹಾರಾಷ್ಟ್ರ ಪ್ರವಾಹ ಪೀಡಿತರಿಗೆ ಸಹಾಯ ಮಾಡಿ ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಆದರೆ ರಿತೇಶ್ ಹಾಗೂ ಜೆನಿಲಿಯಾ ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಸರ್ಕಾರ ಪ್ರವಾಹ ಪೀಡಿತ ಸಾಂಗ್ಲಿ, ಕೊಲ್ಹಾಪುರ ಹಾಗೂ ಸತಾರಾ ಜಿಲ್ಲೆಗಳಲ್ಲಿ ಸ್ಥಾಪಿಸಿರುವ 432 ಪರಿಹಾರ ಕೇಂದ್ರಗಳಿಗೆ ಒಟ್ಟು 3.78 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಮಹಾರಾಷ್ಟ್ರದ ದಕ್ಷಿಣ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೋಲ್ಹಾಪುರ, ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಹಲವು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ.
ಇತ್ತ ಕರ್ನಾಟಕದ ಬಹುತೇಕ ಜಿಲ್ಲೆಗಳು ನದಿಗಳ ಅಬ್ಬರಕ್ಕೆ ಬೆಚ್ಚಿ ಬೀಳುತ್ತಿವೆ. ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮಗಳು ಜಲಾವೃತಗೊಂಡಿವೆ. ನಿರಾಶ್ರಿತರಿಗಾಗಿ ಸ್ಥಳೀಯ ಸುರಕ್ಷಿತ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ.